Friday, November 20, 2026

ಪ್ರಾಯೋಗಿಕ ಆವೃತ್ತಿ

ನಾಗಮಂಗಲ| ಹರದನಹಳ್ಳಿ ಗ್ರಾ.ಪಂ ಕಾಂಗ್ರೆಸ್ ಬೆಂಬಲಿತರ ಪಾಲು

ನಾಗಮಂಗಲ ತಾಲ್ಲೂಕಿನ ದೇವಲಾಪುರ ಹೋಬಳಿ ಹರದನಹಳ್ಳಿ ಗ್ರಾ.ಪಂ.ನ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದ್ದ ಸ್ಥಾನಕ್ಕೆ ಯಡವನಹಳ್ಳಿ ಕ್ಷೇತ್ರದ ಲಕ್ಷ್ಮಮ್ಮ ಮಂಜಪ್ಪ ಮತ್ತು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ನಲ್ಕುಂದಿ ಕ್ಷೇತ್ರದ ವರ್ಷಾ ಬಾಬು ಅವಿರೋಧವಾಗಿ ಆಯ್ಕೆಯಾದರು.
ಈ ಇಬ್ಬರು ಸಚಿವ ಎನ್.ಚಲುವರಾಯಸ್ವಾಮಿ ಬೆಂಬಲಿಗರಾಗಿದ್ದು, ಪಂಚಾಯಿತಿ ಕಾಂಗ್ರೆಸ್ ಬೆಂಬಲಿಗರ ಪಾಲಾಗಿದೆ. ಮನ್ಮುಲ್ ಮಾಜಿ ಅಧ್ಯಕ್ಷ ಡಿ.ಟಿ.ಕೃಷ್ಣೇಗೌಡ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಡಿ.ಕೆ.ರಾಜೇಗೌಡ, ತಾ.ಪಂ. ಮಾಜಿ ಅಧ್ಯಕ್ಷ ಭೀಮನಹಳ್ಳಿ ಮರಿಸ್ವಾಮಿ, ಪಿಎಲ್‌ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ತಮ್ಮಣ್ಣ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎನ್.ಕೆ.ವಸಂತಮಣಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಅಧ್ಯಕ್ಷ – ಉಪಾಧ್ಯಕ್ಷರನ್ನು ಅಭಿನಂದಿಸಿದರು.
ಚುನಾವಣಾಧಿಕಾರಿಗಳಾಗಿ ಲೋಕೋಪಯೋಗಿ ಇಲಾಖೆ ಎಇಇ ನಂದಕುಮಾರ್, ಪಿಡಿಒ ಬಸವಶೆಟ್ಟಿ ಕಾರ್ಯನಿರ್ವಹಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ