Friday, November 20, 2026

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ನೀಡಿದೆ – ಮಧು ಜಿ.ಮಾದೇಗೌಡ

ಕಾಂಗ್ರೆಸ್ ಸರ್ಕಾರ ನುಡಿದಂತೆ 5 ಗ್ಯಾರಂಟಿಗಳ ಯೋಜನೆಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ, ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲಬಂದಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ತಿಳಿಸಿದರು.

ಮದ್ದೂರು ತಾಲ್ಲೂಕಿನ ಭಾರತೀನಗರ ಸಮೀಪದ ಕೊಕ್ಕರೆಬೆಳ್ಳೂರು ಗ್ರಾಮಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೆಂಪರಾಜು ಅವರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಡಜನರಿಗಾಗಿ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡುತ್ತಿದೆ, ಇದರಿಂದ ಬಡಜನರ ಆರ್ಥಿಕ ವ್ಯವಸ್ಥೆ ಸುಧಾರಿಸಲಿದೆ, ಹಾಗಾಗಿ ಕಾಂಗ್ರೆಸ್ ಪಕ್ಷಕ್ಕೆ ಜನರ ಒಲವು ಹೆಚ್ಚಾಗಿದೆ ಎಂದರು.

ಮದ್ದೂರು ತಾಲ್ಲೂಕಿನಲ್ಲಿ ಬಹುತೇಕ ಪಂಚಾಯಿತಿಗಳು ಕಾಂಗ್ರೆಸ್ ತೆಕ್ಕೆ ಹಿಡಿದಿದ್ದು, ನಮ್ಮ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ನನ್ನನ್ನು ಅಭಿನಂದಿಸುತ್ತಿರುವುದು ನನಗೆ ಸಂತಸ ತಂದಿದೆ. ಮುಂದಿನ ದಿನಗಳಲ್ಲೂ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕೆಂದು ಸಲಹೆ ನೀಡಿದರು.

ಜಾಹೀರಾತು

ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಟಗೊಳಿಸಲು ಜಿಲ್ಲಾಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಶ್ರಮಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಂತಹ ಜೋಡೆತ್ತುಗಳ ನೇತೃತ್ವದಲ್ಲಿ  ಪಕ್ಷ ಸಂಘಟನೆಗೊಳ್ಳುತ್ತಿರುವುದು ಅನ್ಯಪಕ್ಷಗಳಿಗೆ ಅಸೂಯೆ ತಂದಿದೆ ಎಂದರು.

ಇದೇ ವೇಳೆ ತಾ.ಪಂ ಮಾಜಿ ಸದಸ್ಯ ದೇವೇಗೌಡನದೊಡ್ಡಿ ಗಿರೀಶ್, ಕಾರ್ಕಹಳ್ಳಿ ಸ್ವರೂಪ್ ಚಂದ್ರ, ಮುಖಂಡರಾದ ಬಿ.ಎನ್.ಶಿವಲಿಂಗೇಗೌಡ, ರಾಜಣ್ಣ, ಯೋಗೇಶ್, ರಾಜೇಅರಸು, ಮರೀಗೌಡ, ದೇವರಾಜು, ಮಾದುರಾಯನಶೆಟ್ಟಿ ಸೇರಿದಂತೆ ಹಲವರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ