Sunday, November 22, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಜೆಡಿಎಸ್ ಮುಖಂಡನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ದಾಳಿ

ಜೆಡಿಎಸ್ ಮುಖಂಡ ಹಾಗೂ ಮಾಜಿ ರೌಡಿ ಶೀಟರ್ ಅಪ್ಪು ಪಿ. ಗೌಡನ ಮೇಲೆ ಆರು ಮಂದಿ ದುಷ್ಕರ್ಮಿಗಳು ಮಾರಣಾಂತಿಕ ದಾಳಿ ನಡೆಸಿದ್ದಾರೆ.

ಮದ್ದೂರಿನ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಸುಮಾರು 9 ಗಂಟೆಯ ಸಮಯದಲ್ಲಿ ಅಪ್ಪು ಪಿ‌.ಗೌಡ ದೇವರಿಗೆ ಕೈ ಮುಗಿಯುತ್ತಿದ್ದ ಸಂದರ್ಭದಲ್ಲಿ ಆತನ ಮೇಲೆ ಮಚ್ಚು,ಲಾಂಗ್ ಗಳಿಂದ ದಾಳಿ ನಡೆಸಿದ ಆರು ಮಂದಿ ದುಷ್ಕರ್ಮಿಗಳು ಆತನ ಭುಜ ಹಾಗೂ ಬೆನ್ನಿಗೆ ಲಾಂಗ್ ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಪ್ರತಿ ಶನಿವಾರ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುತ್ತಿದ್ದ ಅಪ್ಪುಗೌಡ ಇಂದು ಕೂಡ ದೇವಸ್ಥಾನಕ್ಕೆ ತೆರಳಿದ್ದರು. ಆತನ ಬರುವಿಕೆಯನ್ನೇ ಹೊಂಚು ಹಾಕಿ ಕಾದಿದ್ದ ಆರು ಮಂದಿ ದುಷ್ಕರ್ಮಿಗಳು ಕೈ ಮುಗಿಯುತ್ತಿದ್ದ ಸಂದರ್ಭದಲ್ಲಿ ಮಾರಕಾಸ್ತ್ರ ಹಿಡಿದು ಹಿಂದಿನಿಂದ ಅಟ್ಯಾಕ್ ಮಾಡಿದ್ದಾರೆ.

ತಕ್ಷಣ ದೇಗುಲದಲ್ಲಿದ್ದ ಭಕ್ತರು ಕೂಗಿ ಕೊಳ್ಳುತ್ತಿದ್ದಂತೆ ಒಮ್ಮೆ ಲಾಂಗ್ ಬೀಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಅದೃಷ್ಟವಶಾತ್ ಅಪ್ಪು ಗೌಡ ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದು,ಮದ್ದೂರು ತಾಲ್ಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದುರ್ಷರ್ಮಿಗಳ ಬಂಧನ
ಅಪ್ಪು ಪಿ.ಗೌಡನ ಮೇಲೆ ಮಾರಣಾಂತಿಕ ದಾಳಿ ನಡೆಸಿ ಟಾಟಾ ಸುಮೋದಲ್ಲಿ ಪರಾರಿಯಾಗುತ್ತಿದ್ದ ಆರು ಮಂದಿ ದುರ್ಷರ್ಮಿಗಳ ಬೆನ್ನು ಹತ್ತಿದ ಪೋಲಿಸರು ಮಳವಳ್ಳಿ ಹಲಗೂರು ಬಳಿ ಬಂಧಿಸಿದ್ದಾರೆ.

ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ