“ಸ್ವಚ್ಛತೆಯಿಂದ ಪರಿಸರ ಪರಿಶುದ್ಧವಾಗುತ್ತದೆ. ಮನೆಯಂಗಳ ಹಾಗೂ ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.
ಮಂಡ್ಯದ ಶಂಕರನಗರ ಬಡಾವಣೆಯಲ್ಲಿರುವ ಬಿ.ಎಲ್.ಎಸ್.ಈ ಎನ್. ಸಿ (ಬಿ ಎಲ್ ಎಸ್ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜ್) ಕಾಲೇಜಿನ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿಮ್ಮ ಕಾಲೇಜಿನ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಬಹಳ ಒಳ್ಳೆಯ ವಿಷಯ. ಕೇವಲ ಪಠ್ಯಪುಸ್ತಕ ಓದುವುದರಿಂದ ಉತ್ತಮ ವಿದ್ಯಾರ್ಥಿಗಳಾಗುವುದಿಲ್ಲ, ಅದರೊಟ್ಟಿಗೆ ಇಂತಹ ಸಾಮಾಜಿಕ ಚಟುವಟಿಕೆಗಳೊಂದಿಗೆ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬಹುದಾಗಿದೆ” ಎಂದು ಹೇಳಿದರು. ಇಂತಹ ಕಾರ್ಯಕ್ರಮಗಳು ಹೀಗೆ ಮುಂದುವರಿಯಲಿ ಎಂದು ಕಾರ್ಯಕ್ರಮವನ್ನು ಆಯೋಜಿಸಿದ ಕಾಲೇಜಿನವರಿಗೆ ಪ್ರಶಂಸಿಸಿದರು.
ಈ ಸಂದರ್ಭದಲ್ಲಿ ಬಿ.ಎಲ್.ಎಸ್ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನ ಅಧ್ಯಕ್ಷ ಎಂ.ಎಸ್ ಕಾರ್ತಿಕ್, ಕಾರ್ಯದರ್ಶಿ ಎಂ.ಎಸ್ ಚಿರಂಜೀವಿ, ಆಡಳಿತಾಧಿಕಾರಿ ಎನ್.ಚಂಪಕ, ನಗರಸಭಾ ಸದಸ್ಯರಾದ ಮೀನಾಕ್ಷಿ ಪುಟ್ಟಸ್ವಾಮಿ, ರಾಮಲಿಂಗಯ್ಯ, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ತಾರಾಶ್ರೀ, ಐ.ಟಿ.ಐ ಕಾಲೇಜಿನ ಪ್ರಾಂಶುಪಾಲರಾದ ಲಿಂಗರಾಜು, ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಆನಂದ್ ಇನ್ನಿತರರಿದ್ದರು.




