ಸಚಿವ ಚಲುವರಾಯಸ್ವಾಮಿ ವಿರುದ್ದ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಸಂದರ್ಭದಲ್ಲಿ ಇಂದು ಸಂಜೆ ಪಂಚಿನ ಮೆರವಣಿಗೆ ನಡೆಸಲು ಹೋರಾಟ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸುತ್ತಿದ್ದ ವೇದಿಕೆ ಸಮೀಪ ತೆರಳಿದಾಗ 2 ಪಕ್ಷಗಳ ಕಾರ್ಯಕರ್ತರು ಪರಸ್ಪರ ಘೋಷಣೆಗಳನ್ನು ಕೂಗಿದ್ದರಿಂದ ಕೆಲಕಾಲ ಗದ್ದಲ ಉಂಟಾಗಿ, ಉದ್ವೇಗದ ವಾತಾವರಣ ನಿರ್ಮಾಣವಾಯಿತು.
ಪರಿಸ್ಥಿತಿಯನ್ನು ಅವಲೋಕಿಸಿದ ಪೊಲೀಸರು ಎಚ್ಚೇತ್ತು ಯಾವುದೇ ಗಲಾಟೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದರಿಂದ ಅನಾಹುತವೊಂದು ತಪ್ಪಿದಂತಾಯಿತು.

ಘಟನೆ ವಿವರ
ಅಹೋ ರಾತ್ರಿ ಧರಣಿ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಧರಣಿ ಅಂತ್ಯಗೊಳಿಸಿ, ಇಂದು ಸಂಜೆ ಪಂಜಿನ ಮೆರವಣಿಗೆ ಹೊರಟಾಗ ಕಾಂಗ್ರೆಸ್ ವೇದಿಕೆ ಮುಂಭಾಗಕ್ಕೆ ತೆರಳಿ ಘೋಷಣೆಗಳನ್ನು ಕೂಗಿದರು, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಮೊಳಗಿಸಿದರು.

ಈ ಸಂದರ್ಭದಲ್ಲಿ ಗದ್ದಲ ಉಂಟಾಯಿತು, ಬಿಜೆಪಿಯವರು ಹೆದ್ದಾರಿಯಲ್ಲಿ ಮಂಜು ಹಿಡಿದು ದಿಕ್ಕಾರ ಕೂಗಿದರೆ, ಕಾಂಗ್ರೆಸ್ ಕಾರ್ಯಕರ್ತರು ವೇದಿಕೆ ಬಳಿ ದಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. ಇದರಿಂದ ಉದ್ವೇಗದ ವಾತಾವರಣ ನಿರ್ಮಾಣವಾಯಿತು. ಆಗ ಪೊಲೀಸರು ಪರಿಸ್ಥಿತಿ ವಿಕೋಪಕ್ಕೆ ತಿರುಗುವುದನ್ನು ತಪ್ಪಿಸಲು ಉಭಯ ಪಕ್ಷದ ಕಾರ್ಯಕರ್ತರು ಪರಸ್ಪರರ ಬಳಿಗೆ ತೆರಳದಂತೆ ತಡೆಗೋಡೆ ನಡೆಸಿ, ನಡೆಯಬಹುದಾದ ಅಹಿತಕರ ಘಟನೆಯನ್ನು ತಪ್ಪಿಸಿದರು.
ನಂತರ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸಂಜಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಚಲುವರಾಯಸ್ವಾಮಿ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್,ಸಚ್ಚಿದಾನಂದ, ಅಶೋಕ್ ಜಯರಾಮ್, ಎಸ್.ಪಿ.ಸ್ವಾಮಿ, ಡಾ.ಇಂದ್ರೇಶ್, ಅನೂಪ್ ಮತ್ತಿತರರಿದ್ದರು.




