Thursday, November 19, 2026

ಪ್ರಾಯೋಗಿಕ ಆವೃತ್ತಿ

ನಾಳೆ ಮಂಡ್ಯಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ; ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿನ 1 ರಿಂದ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಪೂರಕ ಪೋಷಣ ಪೌಷ್ಠಿಕ ಆಹಾರದ (ಮೊಟ್ಟೆ, ಚಿಕ್ಕಿ, ಬಾಳೆಹಣ್ಣು) ವಿತರಣೆಯ ರಾಜ್ಯ ಮಟ್ಟದ ಕಾರ್ಯಕ್ರಮ ಆ.18ರಂದು ಮಂಡ್ಯನಗರದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಿಗ್ಗೆ 11.30 ಗಂಟೆಗೆ ಮಂಡ್ಯ ನಗರದ ಸರ್ಕಾರಿ ಪೌಢಶಾಲೆ ಹೊಸಹಳ್ಳಿಯಲ್ಲಿ ಆಯೋಜಿಸಲಾಗಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಉದ್ಘಾಟಿಸುವರು. ಪ್ರಾಥಮಿಕ ಮತ್ತು ಪ್ರೌಢಢಶೀಕ್ಷಣ ಸಚಿವರಾದ ಮಧು ಬಂಗಾರಪ್ಪ ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮ ಉದ್ಘಾಟನೆ ಮಾಡುವರು.

ರಾಜ್ಯದಲ್ಲಿ ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆಯನ್ನು ನೀಡಲಾಗುತ್ತದೆ. ವಾರದಲ್ಲಿ ಎರಡು ದಿನ ಊಟದೊಂದಿಗೆ ಮೊಟ್ಟೆ ನೀಡುವ ಕಾರ್ಯಕ್ರಮವು ಆಗಸ್ಟ್‌ 18ರಿಂದ ಜಾರಿಗೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಹಲವು ಬದಲಾವಣೆ ತರಲಾಗುತ್ತಿದೆ. ಇದೂವರೆಗೂ 8ನೇ ತರಗತಿವರೆಗೆ ಮಾತ್ರ ಮೊಟ್ಟೆ ನೀಡಲಾಗುತ್ತಿತ್ತು. ಇನ್ನು ಮುಂದೆ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೂ ಮೊಟ್ಟೆ ನೀಡಲಾಗುತ್ತದೆ” ಎಂದಿದ್ದಾರೆ.

“ಆಗಸ್ಟ್ 18ರಂದು ಕಾರ್ಯಕ್ರಮಕ್ಕೆ ಮಂಡ್ಯದಲ್ಲಿ ಚಾಲನೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೆತ್ರದಲ್ಲಿ ಇನ್ನೂ ಹಲವು ಬದಲಾವಣೆಗಳು ಬರಲಿವೆ” ಎಂದು ಹೇಳಿದ್ದಾರೆ.

“ಡಿಜಿಟಲ್ ಲೈಬ್ರರಿಯಲ್ಲಿ 40 ಲಕ್ಷದಷ್ಟು ಪುಸ್ತಕಗಳಿವೆ. ಈ ಕಾರ್ಯಕ್ರಮಕ್ಕೆ ಸೆ.5ರಂದು ಮರು ಚಾಲನೆ ನೀಡಲಾಗುತ್ತದೆ” ಎಂದು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ