Thursday, November 19, 2026

ಪ್ರಾಯೋಗಿಕ ಆವೃತ್ತಿ

ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಿ; ಶಾಸಕ ರವಿಕುಮಾರ್ ಗಣಿಗ

ಕೃಷ್ಣರಾಜಸಾಗರ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವುದನ್ನು ಕೂಡಲೇ ನಿಲ್ಲಿಸಬೇಕೆಂದು ಮಂಡ್ಯ ಶಾಸಕ ರವಿಕುಮಾರ್ ಗಣಿಗ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಬಗ್ಗೆ ನುಡಿಕರ್ನಾಟಕ.ಕಾಂನೊಂದಿಗೆ ಮಾತನಾಡಿರುವ ಅವರು, ನಮ್ಮ ಜಿಲ್ಲೆಯ ರೈತರೇ ಸಂಕಷ್ಟದಲ್ಲಿರುವಾಗ ತಮಿಳುನಾಡಿಗೆ ನೀರು ಕೊಡುತ್ತಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ, ರಾಜ್ಯ ಸರ್ಕಾರ ಪ್ರಸ್ತುತ ಸಂಕಷ್ಟ ಪರಿಸ್ಥಿತಿಯನ್ನು ಸುಪ್ರಿಂಕೋರ್ಟ್ ಗೆ ಮನವರಿಕೆ ಮಾಡಿಕೊಡಬೇಕು, ಕೂಡಲೇ ಕೆಆರ್’ಎಸ್ ಅಣೆಕಟ್ಟೆಯಿಂದ ಬಿಡುಗಡೆ ಮಾಡಿರುವ ನೀರು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ದರ್ಶನ್ ಪುಟ್ಟಣಯ್ಯ ವಿರೋಧ

ಕೆಆರ್’ಎಸ್ ಅಣೆಕಟ್ಟೆ ಭರ್ತಿಯಾಗಿಲ್ಲದಿದ್ದರೂ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿರುವುದದನ್ನು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೂಡ ಖಂಡಿಸಿದ್ದು, ಇಂದು ಕೆಆರ್’ಎಸ್ ನಲ್ಲಿ ರೈತಸಂಘದ ಕಾರ್ಯಕರ್ತರೊಂದಿಗೆ ಪತ್ರಿಭಟನೆ ನಡೆಸಿದರು.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸಂಕಷ್ಟ ಪರಿಸ್ಥಿತಿ ಬಗ್ಗೆ ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಮನದಟ್ಟು ಮಾಡಿಸಿ ಜಿಲ್ಲೆಯ ರೈತರ ಹಿತವನ್ನು ಕಾಪಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ