Friday, September 20, 2024

ಪ್ರಾಯೋಗಿಕ ಆವೃತ್ತಿ

AIDSO 8ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನ

ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (AIDSO) ವತಿಯಿಂದ ಮುಂಬರುವ ಸೆಪ್ಟೆಂಬರ್
1ರಿಂದ 3ರವರೆಗೆ ತುಮಕೂರಿನಲ್ಲಿ AIDSO 8ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನ ನಡೆಯಲಿದೆ.

ಈ ಸಮ್ಮೇಳನದದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒದಗಿಸಿ, ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಿ, ಪಠ್ಯಕ್ರಮದ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಧರ್ಮನಿರಪೇಕ್ಷ ವಾತಾವರಣವನ್ನು ರಕ್ಷಿಸಿ, ವಿದ್ಯಾರ್ಥಿವೇತನ ಮತ್ತು ಹಾಸ್ಟೆಲ್‌ ಸೌಲಭ್ಯಗಳನ್ನು ಖಾತ್ರಿಪಡಿಸುವಂತೆ ಒತ್ತಾಯಿಸಲಾಗುವುದು. ಎನ್ಇಪಿ- 2020ರ ಅಪ್ರಜಾತಾಂತ್ರಿಕ ಹೇರಿಕೆಯನ್ನು ಕೈಬಿಡುವಂತೆ, ಸ್ವಯಂ ಹಣಕಾಸು ಸಂಸ್ಥೆಗಳನ್ನು ನಿಲ್ಲಿಸಿ, ತಾರತಮ್ಯವಿಲ್ಲದೆ ಎಲ್ಲಾ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡುವಂತೆ ಹಾಗೂ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡುವಂತೆ ಹಕ್ಕೊತ್ತಾಯ ಮಾಡಲಾಗುವುದು.

ಶಿಕ್ಷಣ ಮತ್ತು ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಎಐಡಿಎಸ್ಓ ಸಂಘಟನೆಯು ಕರ್ನಾಟಕ ರಾಜ್ಯದಲ್ಲಿ ಕಳೆದ 5 ದಶಕಗಳಿಂದಲೂ ಚಳುವಳಿಗಳನ್ನು ಬೆಳೆಸುತ್ತಾ ಬಂದಿದ್ದು, ಶುಲ್ಕ ಏರಿಕೆ ವಿರೋಧಿ ಚಳುವಳಿ, ಹಾಸ್ಟೆಲ್ ಚಳುವಳಿಗಳು, ಸರ್ಕಾರಿ ಶಾಲೆ ಉಳಿಸಲು ಹೋರಾಟ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ವಿರೋಧಿಸಿ ಹೋರಾಟ, ಉಚಿತ ಬಸ್ ಪಾಸ್ ಗಾಗಿ ಹೋರಾಟ.. ಇನ್ನಿತರ ಹತ್ತಾರು ಚಳುವಳಿಗಳನ್ನು ಎಐಡಿಎಸ್ಓ ಮುನ್ನಡೆಸಿದೆ. ಕಳೆದ ವರ್ಷ ‘ಸಾರ್ವಜನಿಕ ಶಿಕ್ಷಣ ಉಳಿಸಿ’ ಬೃಹತ್ ಆಂದೋಲನ ನಡೆಸಿದೆ, ರಾಜ್ಯದಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿ 35 ಲಕ್ಷಕ್ಕೂ ಅಧಿಕ ಸಹಿಗಳನ್ನು ಸಂಗ್ರಹ ಮಾಡಿದೆ,  ರಾಜ್ಯದಲ್ಲಿ ಈ ಆಂದೋಲನವು ದೊಡ್ಡ ಪ್ರಭಾವ ಬೀರಿದ್ದು, ನೂರಾರು ಶಿಕ್ಷಕರು, ಪ್ರಾಂಶುಪಾಲರು, ಪೋಷಕರು ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದು AIDSO ಮಂಡ್ಯ ಜಿಲ್ಲಾ ಸಂಚಾಲಕಿ ಚಂದ್ರಕಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತುಮಕೂರಿನಲ್ಲಿ ನಡೆಯುವ ರಾಜ್ಯ ಸಮ್ಮೇಳನವು ಈ ಚಳುವಳಿಗಳನ್ನು ಮತ್ತಷ್ಟು ಬಲಗೊಳಿಸುವ ಗುರಿಯನ್ನು ಹೊಂದಿದೆ. ನವೋದಯ ಚಿಂತಕರ ಹಾಗೂ ಕ್ರಾಂತಿಕಾರಿಗಳ ಆಶಯವನ್ನು ನಾವು ಪೂರ್ಣಗೊಳಿಸಬೇಕು. ಈ ವಿದ್ಯಾರ್ಥಿ ಸಮ್ಮೇಳನದ ಮೂಲಕ ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ಪ್ರಬಲ ಸಂಘಟಿತ ಹೋರಾಟಗಳನ್ನು ಬೆಳೆಸುವ ಸಂಕಲ್ಪವನ್ನು ನಾವು ತೊಡಬೇಕು, ಎಲ್ಲಿಯವರೆಗೂ ಶಿಕ್ಷಣವು ಸರ್ಕಾರಗಳ ಆದ್ಯತೆ ಆಗುವದಿಲ್ಲವೋ, ಅಲ್ಲಿಯವರೆಗೂ ನಮ್ಮ ಮೂಲಭೂತ ಹಕ್ಕುಗಳನ್ನು ಹೋರಾಟದ ಮೂಲಕವೇ ನಾವು ಗೆದ್ದುಕೊಳ್ಳಬೇಕು ಎಂದು ಎಐಡಿಎಸ್ಓ ನಂಬುತ್ತದೆ. ಸೆಪ್ಟೆಂಬರ್ ‌1,2 ಮತ್ತು 3, ತುಮಕೂರಿನಲ್ಲಿ ಸಂಘಟಿಸಿರುವ ರಾಜ್ಯಮಟ್ಟದ ವಿದ್ಯಾರ್ಥಿ ಸಮ್ಮೇಳನವನ್ನು ಯಶಸ್ವಿಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬ ವಿದ್ಯಾರ್ಥಿಯ ಮೇಲಿದೆ. ಈ ಜವಾಬ್ದಾರಿಯನ್ನು ರಾಜ್ಯದ ವಿದ್ಯಾರ್ಥಿಗಳು ಅತ್ಯಂತ ಸಂತೋಷದಿಂದ ಮತ್ತು ದೃಢ ನಿಶ್ಚಯದೊಂದಿಗೆ ನಿಭಾಯಿಸಿ, ರಾಜ್ಯದಲ್ಲಿ ವಿದ್ಯಾರ್ಥಿ ಚಳುವಳಿಯನ್ನು ಮುನ್ನಡೆಸುವರು ಎಂಬ ವಿಶ್ವಾಸ ನಮಗಿದೆ ಅವರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!