ರಾಜ್ಯದ ರೈತರಿಗೆ ದ್ರೋಹ ಮಾಡಿ, ತಮಿಳುನಾಡಿಗೆ ನೀರು ಕೊಡಲಾಗುತ್ತಿದೆ ಎಂದು ಆರೋಪಿಸಿ ಕೆ.ಆರ್.ಎಸ್ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಪರ ಹೋರಾಟಗಾರರನ್ನು ಶನಿವಾರ ಪೊಲೀಸರು ಬಂಧಿಸಿದರು.
ಕೆ.ಆರ್.ಎಸ್ ಮುಖ್ಯದ್ವಾರದಲ್ಲಿ ಪ್ರತಿಭಟಿಸಿದ ಪ್ರತಿಭಟನಕಾರರು ನಂತರ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು, ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರ ನಡುವೆ ಮಾತಿನ ಚಕಮಕಿ ನಡೆಯಿತು. ಅನಂತರ ಹೋರಾಟಗಾರರನ್ನು ಪೊಲೀಸರು ಬಂಧಿಸಿ ಕರೆದೊಯ್ದರು. ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸ್ಥಳದಲ್ಲಿ ಮೊಕ್ಕಂ ಹೂಡಿದ್ದರು.
ಬೆಂಗಳೂರಿನಿಂದ ಆಗಮಿಸಿದ್ದ ಕನ್ನಡ ಪರ ಸಂಘಟನೆಗಳ ಮುಖಂಡರು ಈ ಮೊದಲು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದರು.