Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಆ.31ಕ್ಕೆ ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ ಪ್ರದಾನ

ಜನದನಿ ಸಾಂಸ್ಕೃತಿಕ ಟ್ರಸ್ಟ್ ಹಾಗೂ ಕರ್ನಾಟಕ ಸಂಘದಿಂದ ಕೊಡಮಾಡುವ 26ನೇ ವರ್ಷದ ಇಂಡುವಾಳು ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿಗೆ ಮಂಡ್ಯದ ಸೇವಾಕಿರಣ ಪಬ್ಲಿಕ್ ವೆಲ್‌ಫೇರ್ ಚಾರಿಟಬಲ್ ಟ್ರಸ್ಟ್ ಹಾಗೂ ದೇವಮ್ಮ ಇಂಡುವಾಳು ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿಗೆ ನಂಜನಗೂಡು ತಾಲ್ಲೂಕು ಆಲಂಬೂರು ಗ್ರಾಮದ ಚಿಕ್ಕರಂಗಮ್ಮ ಆಯ್ಕೆಯಾಗಿದ್ದಾರೆ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಬಿ.ಜಯಪ್ರಕಾಶಗೌಡ ತಿಳಿಸಿದರು.

ಆ.31ರಂದು ಮಂಡ್ಯ ನಗರದ ಕರ್ನಾಟಕ ಸಂಘದ ಆವರಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ತಲಾ 25 ಸಾವಿರ ರೂ. ನಗದಿನ ಜತೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದರೊಂದಿಗೆ 2022-23ನೇ ಸಾಲಿನ ಎಚ್.ಶಾರದಮ್ಮ ಮತ್ತು ಕೆಂಪಯ್ಯ ವಿದ್ಯಾರ್ಥಿ ಪುರಸ್ಕಾರವನ್ನು ಇಂಡುವಾಳು ಪ್ರೌಢಶಾಲೆಯ ಇಬ್ಬರು ಹಾಗೂ ಕೊತ್ತತ್ತಿ ವಿದ್ಯಾಗಣಪತಿ ಪ್ರೌಢಶಾಲೆಯ ಇಬ್ಬರಿಗೆ ನೀಡಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಂದು ಸಂಜೆ 4 ಗಂಟೆಗೆ ಆಯೋಜಿಸಿರುವ ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ.ಕುಮಾರ ವಹಿಸಲಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಬಿ. ಶ್ರೀನಿವಾಸಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದು, ಲಯನ್ಸ್ ಜಿಲ್ಲಾ ಸಲಹೆಗಾರ ಕೆ.ದೇವೇಗೌಡ ಹಾಗೂ ಇಂಡುವಾಳು ಎಚ್.ಹೊನ್ನಯ ಅವರ ಮಗ ಡಾ.ಎಚ್.ಸಿದ್ದಪ್ಪ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಜನದನಿ ಸಾಂಸ್ಕೃತಿಕ ಟ್ರಸ್ಟ್ ಅಧ್ಯಕ್ಷ ಜಯರಾಂ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ