Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೃಷ್ಣರಾಜಸಾಗರ ಜಲಾಶಯಕ್ಕೆ ಸಚಿವ ಆನಂದ್ ಸಿಂಗ್ ಭೇಟಿ

ವಿಶ್ವ ವಿಖ್ಯಾತ ಕೃಷ್ಣರಾಜಸಾಗರದ ಬೃಂದಾವನದಲ್ಲಿನ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮತ್ತು ಜಂಗಲ್ ಲಾಡ್ಜ್ ವ್ಯಾಪ್ತಿಯ ಹೋಟೆಲ್‌ಗಳಿಗೆ ಪ್ರವಾಸೋದ್ಯಮ,ಪರಿಸರ ಸಚಿವ ಆನಂದ್‌ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಅನೌಪಚಾರಿಕ ಭೇಟಿ ಎಂದು ಸ್ಪಷ್ಟಪಡಿಸಿದ ಸಚಿವ ಆನಂದ್‌ಸಿಂಗ್ ತಮ್ಮ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಎರಡು ಹೋಟೆಲ್‌ಗಳಿಗೆ ಭೇಟಿ ನೀಡಿ ಇಲ್ಲಿನ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬೃಂದಾವನದಲ್ಲಿರುವ ಜಂಗಲ್ ಲಾಡ್ಜ್ ಸ್ವಾಮ್ಯಕ್ಕೆ ಒಳಪಟ್ಟಿರುವ ರಾಯಲ್ ಆರ್ಕಿಡ್ ಹೋಟಲ್‌ಗೂ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಲಾಡ್ಜ್ ನ ಎಂ.ಡಿ ಮನೋಜ್ ಕುಮಾರ್ ಪಾರ್ಕಿಂಗ್ ವ್ಯವಸ್ಥೆಯಿಲ್ಲದೆ ಹೋಟೆಲ್‌ಗೆ ಬರುವ ಪ್ರವಾಸಿಗರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾಹಿತಿ ನೀಡಿ ಕಾವೇರಿ ನೀರಾವರಿ ನಿಗಮದ ಸ್ಥಳದಲ್ಲಿ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಿಕೊಡುವಂತೆ ಸಚಿವರಿಗೆ ಮನವಿ ಮಾಡಿದರು.ಈ ಬಗ್ಗೆ ಇಲಾಖೆಯೊಂದಿಗೆ ಮಾತನಾಡುವುದಾಗಿ ತಿಳಿಸಿದರು.

ಹೋಟೆಲ್ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಸಚಿವರು, ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ತಿಳಿಸಿದರು.

ಪ್ರವಾಸಿ ತಾಣಗಳ ಸಂಪರ್ಕ ರಸ್ತೆ ಹಾಳಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು ಚುನಾವಣೆ ನೀತಿ ಸಂಹಿತೆ ಇರುವುದರಿಂದ ಈ ಬಗ್ಗೆ ಪ್ರತಿಕ್ರಿಯಿಸುವುದು ಸೂಕ್ತವಲ್ಲ.ಇದು ನನ್ನ ಅನೌಪಚಾರಿಕ ಭೇಟಿಯಾಗಿದ್ದು, ಚುನಾವಣೆ ನಂತರ ಪ್ರವಾಸಿ ತಾಣಗಳ ಸಂಪರ್ಕ ರಸ್ತೆ ಅಭಿವೃದ್ಧಿ ಸಂಬಂಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!