ಶಾಲಾ ಶಿಕ್ಷಣ ಇಲಾಖೆ ಏರ್ಪಡಿಸಿದ್ದಂತಹ ಮಂಡ್ಯ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮಂಡ್ಯ ನಗರದ ಹೊರವಲಯದ ಮಾಂಡವ್ಯ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿ ಅದ್ಭುತ ಸಾಧನೆಗೈದು ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಬಾಲಕರ ವಿಭಾಗದಲ್ಲಿ ಯತೀಶ್ ಎಂ. ಹ್ಯಾಮರ್ ಎಸೆತದಲ್ಲಿ ಪ್ರಥಮ ಸ್ಥಾನ, ರಕ್ಷಿತ್ ಪ್ರಸಾದ್ ಬಿ.ಆರ್. ದ್ವಿತೀಯ ಸ್ಥಾನ, ತೇಜಸ್ ಸಿ ಗೌಡ 100 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ತೇಜಸ್ ವೈ ಎಂ ಮತ್ತು ತಂಡ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಬಾಲಕಿಯರ ವಿಭಾಗದಲ್ಲಿ ಹರ್ಷಿತ ಹೆಚ್.ಎಸ್ ಮತ್ತು ತಂಡ ಥ್ರೋಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ, ಭಾವನಾ ಬಿ ಮತ್ತು ತಂಡ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ, ಸಂಯುಕ್ತ ಎಂ.ಎಸ್ 100 ಮೀಟರ್ ಓಟ ಸ್ಪರ್ಧೆಯಲ್ಲಿ ತೃತೀಯ ಮತ್ತು 400 ಮೀಟರ್ ಓಟ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಈ ಕ್ರೀಡಾಪಟುಗಳನ್ನು ಎಸ್.ಬಿ.ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಪ್ರೊ. ಬಿ. ಶಿವಲಿಂಗಯ್ಯ, ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ, ಕಾಲೇಜಿನ ಪ್ರಾಂಶುಪಾಲ ಎಚ್.ಎಂ. ಶ್ರೀನಿವಾಸ್, ಶೈಕ್ಷಣಿಕ ಪಾಲುದಾರರಾದ ಕೆ. ಚೇತನ್ ಕೃಷ್ಣ, ಎಂ.ಆರ್. ಮಂಜು, ದೈಹಿಕ ಶಿಕ್ಷಣ ಉಪನ್ಯಾಸಕರಾದ ಉಮೇಶ್. ಎಂ.ಎಸ್ ಹಾಗೂ ಸಚಿನ್ .ಎಂ, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದಿಸಿದ್ದಾರೆ.




