Wednesday, November 18, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ | ದೇವಿರಮ್ಮಣ್ಣಿ ಕೆರೆಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

ಹೇಮಾವತಿ ಜಲಾಶಯ ಯೋಜನೆಯ ಕಾರ್ಯಪಾಲಕ ಎಂಜಿನಿಯರ್ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಹಾಗೂ ನೀರಾವರಿ ಇಲಾಖೆ ಇಂಜಿನಿಯರುಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಕೃಷ್ಣರಾಜಪೇಟೆ ಪಟ್ಟಣದ ಇತಿಹಾಸ ಪ್ರಸಿದ್ಧವಾದ ದೇವಿರಮ್ಮಣ್ಣಿ ಕೆರೆಯ ಅಚ್ಚು ಕಟ್ಟು ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಆರ್.ಪೇಟೆಯ ಅಗ್ರಹಾರದ ಕೆ.ಕೆ.ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಹೇಮಾವತಿ ಜಲಾಶಯ ಯೋಜನೆಯ ಕಾರ್ಯಪಾಲಕ ಇಂಜಿನಿಯರ್ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕೃಷ್ಣರಾಜಪೇಟೆ ತಾಲೂಕಿನಲ್ಲಿಯೇ ಅತ್ಯಂತ ದೊಡ್ಡ ಕೆರೆಯಾಗಿರುವ ದೇವಿರಮ್ಮಣ್ಣಿ ಕೆರೆಗೆ ನೀರು ಹರಿಸಿ ತುಂಬಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ಹೇಮಾವತಿ ಜಲಾಶಯ ಯೋಜನೆಯ ಎಡದಂಡೆ  ನಾಲೆಯ ವಿಭಾಗ ಕಚೇರಿಯ ಬಳಿ ಧರಣಿ ಸತ್ಯಾಗ್ರಹ ನಡೆಸಿ ನೀರಾವರಿ ಇಲಾಖೆಯ ಇಂಜಿನಿಯರುಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ ರೈತ ಭಾಂದವರು, ಗೊರೂರು ಜಲಾಶಯದಲ್ಲಿ ಸಾಕಷ್ಟು ನೀರಿದ್ದರೂ, ಕೆ.ಆರ್. ಪೇಟೆ ತಾಲೂಕಿನ ವ್ಯಾಪ್ತಿಯ ಕಾಲುವೆಗಳಲ್ಲಿ ನೀರು ಹರಿಸಿ ಕೆರೆಕಟ್ಟೆಗಳನ್ನು ತುಂಬಿಸಲು ಮುಂದಾಗದ ಇಂಜಿನಿಯರ್ ಗಳು ರೈತವಿರೋಧಿ ಧೋರಣೆಯನ್ನು ಅನುಸರಿಸಿ ಕೆಲಸ ಮಾಡುತ್ತಿದ್ದಾರೆ. ರೈತರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವ ನೀರಾವರಿ ಇಲಾಖೆಯ ಇಂಜಿನಿಯರ್ ಗಳು ದೇವಿರಮ್ಮಣ್ಣಿ ಕೆರೆ ಸೇರಿದಂತೆ ತಾಲೂಕಿನ ಇತರೆ ಕೆರೆಕಟ್ಟೆಗಳನ್ನು ತುಂಬಿಸಲು ಮುಂದಾಗಬೇಕು.

ಹೇಮಾವತಿ ಜಲಾಶಯ ಯೋಜನೆಯ ಕಾಲುವೆಗಳ ಮೂಲಕ ಇನ್ನೊಂದು ವಾರದೊಳಗೆ ನೀರು ಹರಿಸಿ ಕೆರೆಗಳನ್ನು ತುಂಬಿಸಬೇಕೆಂದು ಕೃಷ್ಣೆಗೌಡ ಎಚ್ಚರಿಕೆ ನೀಡಿದರು. ದಿಡೀರ್ ಪ್ರತಿಭಟನೆ ನಡೆಸಿ ನೀರಾವರಿ ಇಲಾಖೆಯ ಇಂಜಿನಿಯರ್ ಗಳಿಗೆ ಬಿಸಿ ಮುಟ್ಟಿಸಿದ ರೈತ ಭಾಂದವರು ಕೂಡಲೇ ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶಿವು, ಪುನೀತ್, ಕೋಳಿಮಂಜು ಅನುವಿನಕಟ್ಟೆ ಪುಟ್ಟಸ್ವಾಮಿಗೌಡ, ಮೊಗಣ್ಣಗೌಡ, ಕೆ.ಆರ್. ಪುಟ್ಟಸ್ವಾಮಿ, ದೇವರಾಜು, ಬಸವೇಗೌಡ, ಚಿಕ್ಕಣ್ಣ, ಅನುವಿನಕಟ್ಟೆ ಗ್ರಾಮದ ಮುಖಂಡ ರಾಮಕೃಷ್ಣೇಗೌಡ, ಅಗ್ರಹಾರಬಾಚಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಫಯಾಜ್, ಜೆಡಿಎಸ್ ಯುವ ಮುಖಂಡ ಸಚಿನ್ ಕೃಷ್ಣ ಮುಂತಾದವರು ಪ್ರತಿಭಟನೆಯಲ್ಲಿ ಭಾಗಿಯಾಗಿ ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ