Monday, November 23, 2026

ಪ್ರಾಯೋಗಿಕ ಆವೃತ್ತಿ

ಸಿಪಿಐಎಂನಿಂದ ಜಿಲ್ಲೆಯ ತಾಲ್ಲೂಕು ಕಚೇರಿಗಳಿಗೆ ಮುತ್ತಿಗೆ: ಕೃಷ್ಣೇಗೌಡ

ಬೆಲೆ ಏರಿಕೆ ನಿಲ್ಲಿಸಿ, ಉದ್ಯೋಗ ಒದಗಿಸಿ ಮತ್ತು ಕಾವೇರಿ ಕೊಳ್ಳದ ರೈತರಿಗೆ ಪರಿಹಾರಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ದ ಸೆ.4 ರಿಂದ 7 ರವರೆಗೆ ಮಂಡ್ಯ ಜಿಲ್ಲೆ ಎಲ್ಲಾ ತಾಲ್ಲೂಕು ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದೆಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ತಿಳಿಸಿದರು.

ಮದ್ದೂರು ತಾಲ್ಲೂಕಿನ ಭಾರತೀನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಪಿಐಎಂ ವತಿಯಿಂದ ಸೆ.4 ರಿಂದ 7 ರವರೆಗೆ ಹಮ್ಮಿಕೊಂಡಿರುವ ಹೋರಾಟದಲ್ಲಿ ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿಗಳಿಗೆ ಮುತ್ತಿಗೆ ಹಾಕಲಾಗುವುದು. ಸೆ. 4 ರಂದು ಮಂಡ್ಯ, ಮಳವಳ್ಳಿ, ಮದ್ದೂರು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಸಿಪಿಐಎಂ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕರೆನೀಡಿದರು.

ಮೋದಿ ಆಡಳಿತದಲ್ಲಿ ದೇಶ ದಿವಾಳಿ

2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನತೆಯನ್ನು ದಿವಾಳಿಎಬ್ಬಿಸಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ, ಇದರಿಂದ ಜನತೆ ಹೈರಾಣಾಗಿದ್ದು, ಕಳೆದ 5 ವರ್ಷಗಳಲ್ಲಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಶೇ 67 ರಷ್ಟು ಹೆಚ್ಚಳವಾಗಿದೆ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ರಾಸಾಯನಿಕ ಗೊಬ್ಬರ, ಕೃಷಿ ಉಪಕರಣಗಳು ಹೀಗೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಮುಖಿಯಾಗಿವೆ. ಎಲ್ಲಾ ವಸ್ತುಗಳ ಮೇಲೆ ಮನಸೋ ಇಚ್ಚೆಯಂತೆ ವಿಧಿಸುತ್ತಿರುವ ಜಿಎಸ್ಟಿ ತೆರಿಗೆ ಮತ್ತು ಸರ್ಕಾರ ನೀಡುತ್ತಿದ್ದ ಸಹಾಯ ಧನದ ಕಡಿತ ಇವೆಲ್ಲ ದೇಶವನ್ನು ದಿವಾಳಿಯಂಚಿಗೆ ಕೊಂಡೊಯ್ದಿವೆ ಎಂದು ಕಿಡಿಕಾರಿದರು.

ನಿರುದ್ಯೋಗ ಭತ್ಯೆ ನೀಡಿ

ಕೃಷಿರಂಗದಲ್ಲೂ ಉದ್ಯೋಗ ಸೃಷ್ಠಿಯಾಗುತ್ತಿಲ್ಲ. ಎಲ್ಲಾ ಕ್ಷೇತ್ರಗಳಲ್ಲಿ ಸಾರ್ವಜನಿಕ ಹೂಡಿಕೆ ಮಾಡಿ ಉದ್ಯೋಗ ಸೃಷ್ಠಿಸಬೇಕಿದ್ದ ಸರ್ಕಾರ ಎಲ್ಲವನ್ನು ಕಾರ್ಪೋರೇಟ್ ಸಂಸ್ಥೆಗಳಿಗೆ ಧಾರೆ ಎರೆದು ಯುವ ಜನರ ಬದುಕು ಮತ್ತು ಭವಿಷ್ಯವನ್ನು ಕತ್ತಲೆಗೆ ನೂಕಿದೆ ಎಂದು ಕಿಡಿಕಾರಿದರು.

ಕರ್ನಾಟಕ ರಾಜ್ಯದಿಂದ ಕೇಂದ್ರ ಸರ್ಕಾರ ಸುಮಾರು 4 ಲಕ್ಷ ಕೋಟಿ ತೆರಿಗೆ ಸಂಗ್ರಹ ಮಾಡುತ್ತಿದೆ. ಅದರಲ್ಲಿ ಕೇವಲ 50 ಸಾವಿರ ಕೋಟಿಗಳನ್ನು ಮಾತ್ರ ರಾಜ್ಯಕ್ಕೆ ವಾಪಸ್ಸು ನೀಡುತ್ತಿದೆ, ಇದು ಅನ್ಯಾಯ. ಕೆಲವು ರಾಜ್ಯಗಳಿಂದ ಬಿಡಿ ಕಾಸು ವಸೂಲಿ ಮಾಡದೆ ಮೂಟೆಗಟ್ಟಲೇ ವಾಪಸ್ ಕೊಡಲಾಗುತ್ತಿದೆ. ಈ ತಾರತಮ್ಯ ನಿವಾರಣೆಯಾಗದೆ ರಾಜ್ಯದ ಅಭಿವೃದ್ದಿ ಸಾಧ್ಯವಿಲ್ಲ ಎಂದರು.

ಗೋಷ್ಠಿಯಲ್ಲಿ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ಹನುಮೇಶ್, ಶೋಭಾ, ಆರ್.ಕೃಷ್ಣ ಇದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ