Thursday, November 19, 2026

ಪ್ರಾಯೋಗಿಕ ಆವೃತ್ತಿ

ಕಾವೇರಿ ಹೋರಾಟ| ಕರ್ನಾಟಕ ಜನಪರ ವೇದಿಕೆಯಿಂದ ಪಂಜಿನ ಮೆರವಣಿಗೆ

ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ಖಂಡಿಸಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಭಾನುವಾರ ಸಂಜೆ ಮಂಡ್ಯನಗರದಲ್ಲಿ ಪಂಜಿನ ಮೆರವಣಿಗೆ ಹಾಗೂ ಕಾಲಿಬಿಂದಿಗೆ ಪ್ರದರ್ಶಿಸಿ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಬಿಟ್ಟಿರುವುದನ್ನು ತಕ್ಷಣ ನಿಲ್ಲಿಸಬೇಕು,ರೈತರ ಜೀವನದ ಜೊತೆ ಸರ್ಕಾರ ಚೆಲ್ಲಾಟ ವಾಡಬಾರದು.ಕನ್ನಡ ನಾಡಿನ ಶಾಸಕ,ಸಂಸದರು ರೈತರ ಹಿತ ಕಾಯಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಸರ್ವೋಚ್ಚ ನ್ಯಾಯಾಲಯಕ್ಕೆ ಕಾವೇರಿ ಕಣಿವೆ ಜಲಾಶಯಗಳ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲು ಕರ್ನಾಟಕ ಸರ್ಕಾರ ಮುಂದಾಗಬೇಕು,ಸಂಕಷ್ಟ ಸೂತ್ರ ಪಾಲನೆ ಬಗ್ಗೆ ತಿಳಿಸಬೇಕು, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಪರಿಹಾರ ರೂಪಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ, ಉಪಾಧ್ಯಕ್ಷ ರಂಜಿತ್ ಗೌಡ, ರಾಮನಗರ ಜಿಲ್ಲಾಧ್ಯಕ್ಷ ಕೃಷ್ಣೇಗೌಡ, ಮುಖಂಡರಾದ ರೋಸಿ, ನಿರ್ಮಲ, ರಾಜಮ್ಮ, ಮಂಗಳ ಸೇರಿದಂತೆ ಇನ್ನಿತರರು ಭಾಗವಹಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ