Wednesday, October 23, 2024

ಪ್ರಾಯೋಗಿಕ ಆವೃತ್ತಿ

ಡಿಕೆ ಶಿವಕುಮಾರ್ ಭೇಟಿ ಮಾಡಿದ ತೇಜಸ್ವಿನಿ ಅನಂತಕುಮಾರ್: ಬಿಜೆಪಿ ನಾಯಕನ ಪತ್ನಿ ಕಾಂಗ್ರೆಸ್ ಸೇರುವರೇ ?

ರಾಜ್ಯದಲ್ಲಿ ಆಪರೇಷನ್‌ ಹಸ್ತ ಚರ್ಚೆ ಗರಿಗೆದರಿದ ನಡುವೆ ಮಾಜಿ ಕೇಂದ್ರ ಸಚಿವ ದಿ.ಅನಂತಕುಮಾರ್‌ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್‌ ಅವರು ಸೋಮವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ.

ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮುನ್ನ ತೇಜಸ್ವಿನಿ ಅನಂತಕುಮಾರ್‌ ಅವರು ಡಿಕೆ ಶಿವಕುಮಾರ್‌ ಅವರನ್ನು ಸೋಮವಾರ ಕುಮಾರಕೃಪಾ ಅತಿಥಿ ಗೃಹದಲ್ಲಿ ಭೇಟಿಯಾಗಿದ್ದಾರೆ. ಈ ಮೂಲಕ ತೇಜಸ್ವಿನಿ ಅನಂತಕುಮಾರ್‌ ಅವರು ಬಿಜೆಪಿ ತೊರೆದು, ಕಾಂಗ್ರೆಸ್‌ ಸೇರಲಿದ್ದಾರಾ ಎಂಬ ಚರ್ಚೆ ಕೂಡ ಮುನ್ನೆಲೆಗೆ ಬಂದಿದೆ.

ಈ ಮಾತಿಗೆ ಮತ್ತಷ್ಟು ಪುಷ್ಟಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ತಮ್ಮ ಟ್ವೀಟ್‌ನಲ್ಲಿ “ತೇಜಸ್ವಿನಿ ಅನಂತಕುಮಾರ್‌ ಅವರು ನನ್ನನ್ನು ಭೇಟಿಯಾಗಿ ರಾಜ್ಯ ರಾಜಕೀಯ ವಿಚಾರಗಳನ್ನು ಚರ್ಚಿಸಿದ್ದಾರೆ” ಎಂದು ಹೇಳಿರುವುದು ರಾಜಕೀಯ ಆಸಕ್ತರ ಕಣ್ಣು ಅರಳಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!