Monday, November 23, 2026

ಪ್ರಾಯೋಗಿಕ ಆವೃತ್ತಿ

ಕಾವೇರಿ | ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರಿಂದ ಉರುಳು ಸೇವೆ

ತಮಿಳುನಾಡಿಗೆ ಹರಿಸುತ್ತಿರುವ ನೀರು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿದರು.

ಮಂಡ್ಯ ನಗರದ ಸಂಜಯ ವೃತ್ತದಿಂದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಯೋಗೇಶ್ ಗೌಡ,ರಂಜಿತ್ ಗೌಡ,ಬೆಂಕಿ ಶ್ರೀಧರ್. ನಾಗಲಕ್ಷ್ಮಿ,ರೋಸಿ,ನಿರ್ಮಲ, ತಸ್ನಿಯ ಬಾನು,ಸೋಮಶೇಖರ್, ಗೋವಿಂದನಾಯಕ್, ಜಯಸಿಂಹ,ಯೇಸು, ಕೃಷ್ಣೇಗೌಡ, ದೇವರಾಜ್ ಉರುಳು ಸೇವೆ ಮಾಡಿ ಪ್ರತಿಭಟನೆ ವ್ಯಕ್ತಪಡಿಸಿದರು.

ಕಾವೇರಿ ನಮ್ಮದು,ರಕ್ತ ಕೊಟ್ಟೇವು ಕಾವೇರಿ ಬಿಡೆವು,ಕೂಡಲೇ ನೀರು ನಿಲ್ಲಿಸಿ,ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯ ದೊರಕಲಿ ಎಂದು ಘೋಷಣೆ ಕೂಗುತ್ತಾ ಉರುಳು ಸೇವೆ ಮಾಡಿದರು.

ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್‌ ಗೌಡ ಮಾತನಾಡಿ, ಕನ್ನಂಬಾಡಿ ಜಲಾಶಯದಿಂದ ನಿರಂತರವಾಗಿ ನೀರು ಹರಿದು ಹೋಗುತ್ತಿರುವುದರಿಂದ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿದೆ, ಇದೇ ರೀತಿ ನೀರು ಬಿಡುತ್ತಿದ್ದರೆ ಕುಡಿಯುವ ನೀರಿಗೂ ತತ್ವಾರವಾಗಲಿದ್ದು,ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕದ ಪರ ತೀರ್ಪು ಬರಲು ಕಾವೇರಮ್ಮ ಕರುಣಿಸಲಿ ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ನಾಟಿ ಮಾಡಿರುವ ಬೆಳೆಗೆ ನೀರಿಲ್ಲದಂತಾಗಿದೆ.ಆದರೆ ತಮಿಳುನಾಡಿನ ರೈತರು ಮೂರು ಬೆಳೆ ಬೆಳೆಯುತ್ತಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಕರ್ನಾಟಕದ ಜಲಾಶಯಗಳ ಪರಿಸ್ಥಿತಿ ನೋಡಿ ಮಾತನಾಡಬೇಕು. ಪದೇ ಪದೇ ಸುಪ್ರೀಂ ಕೋರ್ಟ್ ಮೊರೆ ಹೋಗಿ ತಮಿಳುನಾಡು ದಬ್ಬಾಳಿಕೆ ನೀತಿ ಅನುಸರಿಸುತ್ತಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್,ಕಲಾವತಿ,ಮಂಗಳಮ್ಮ, ಮಲ್ಲಣ್ಣ ಮತ್ತಿತರರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ