ಕೋಮು ಸಂಘರ್ಷ ಉಂಟು ಮಾಡುವ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿರುವ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಟಿ.ಎಸ್ ಶ್ರೀವತ್ಸವ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ‘ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ’ ಒತ್ತಾಯಿಸಿದೆ. ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.
ಕಳೆದ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪ್ರತಾಪ್ ಸಿಂಹ, “ಮಹಿಷ ದಸರಾ ಆಚರಣೆ ಮಾಡಲು ಬಿಡುವುದಿಲ್ಲ. ಒಂದು ವೇಳೆ ಮಹಿಷ ದಸರಾ ನಡೆಸಲು ಮುಂದಾದರೆ ಸಂಘರ್ಷ ನಡೆಸಲು ಸಿದ್ದರಿರಬೆಕು” ಎಂದು ಬೆದರಿಕೆ ಮಾತುಗಳನ್ನಾಡಿದ್ದರು. ”ಮಹಿಷ ದಸರಾ ಆಚರಣೆಯನ್ನು ತಡೆಯಲು ಈಗಾಗಲೇ ರೂಪುರೇಷೆ ತಯಾರು ಮಾಡಿರುತ್ತೇವೆ. ಯಾವ ರೀತಿಯಲ್ಲಿ ಮಹಿಷ ದಸರಾ ಮಾಡುತ್ತಾರೊ ನೋಡೋಣ” ಎಂದು ಕೃಷ್ಣ ರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಅವರೂ ಹೇಳಿದ್ದಾರೆ.
”ಮಹಿಷ ದಸರಾ ಆಚರಣೆಯನ್ನು ತಡೆಯಲು ಈಗಾಗಲೇ ರೂಪುರೇಷ ತಯಾರು ಮಾಡಿರುತ್ತೇವೆ. ಯಾವ ರೀತಿಯಲ್ಲಿ ಮಹಿಷ ದಸರಾ ಮಾಡುತ್ತಾರೊ ನೋಡೋಣ” ಎಂದು ಕೃಷ್ಣ ರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಅವರೂ ಹೇಳಿದ್ದಾರೆ. ಅವರಿಬ್ಬರ ಈ ಹೇಳಿಕೆಯು ಪ್ರಚೋದನಾಕಾರಿಯಾಗಿವೆ ಮತ್ತು ಒಂದು ಸಮುದಾಯದ ವಿರುದ್ಧ ದ್ವೇಷ ಬಿತ್ತುವಂತಿವೆ ಎಂದು ಸಂಘಟನೆ ಆರೋಪಿಸಿದೆ.
“ಸಂಸದ ಮತ್ತು ಶಾಸಕರ ಹೇಳಿಕೆಗಳಿಂದ ಮೈಸೂರಿನಲ್ಲಿ ಮಾತ್ರವಲ್ಲ, ರಾಜ್ಯದಲ್ಲಿಯೇ ಅಶಾಂತಿ ವಾತಾವರಣ ಸೃಷ್ಟಿಯಾಗುತ್ತಿದೆ. ಶಾಂತಿ-ಸುವ್ಯವಸ್ಥೆ ಹಾಳಾಗುತ್ತಿದೆ. ಸಾರ್ವಜನಿಕವಾಗಿ ಕೋಮು ಭಾವನೆ ಕೆರಳಿಸುವ ಹೇಳಿಕೆ ನೀಡಿರುವ ಅವರಿಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಸಂಘಟನೆಯ ಅಧ್ಯಕ್ಷ ಎನ್. ಭಾಸ್ಕರ್ ಒತ್ತಾಯಿಸಿದ್ದಾರೆ.