Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಗೆ ಚಾಲನೆ

ಮಂಡ್ಯ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉತ್ತರ ವಲಯ ದೈಹಿಕ ಶಿಕ್ಷಣ ವಿಭಾಗ ಇವರ ಆಶ್ರಯದಲ್ಲಿ ಮಂಡ್ಯದ ಪಿಇಟಿ ಕ್ರೀಡಾಂಗಣದಲ್ಲಿ 14-17 ವರ್ಷದ ವಯೋಮಿತಿಯ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿ ನಡೆಯಿತು.

ಕಾರ್ಯಕ್ರಮವನ್ನು ಡಯಟ್ ಶಿಕ್ಷಣ ಸಂಸ್ಥೆಯ ಉಪ ನಿರ್ದೇಶಕ ಪುರುಷೋತ್ತಮ್ ಉದ್ಘಾಟಿಸಿ ಮಾತನಾಡಿ, ವಿವಿಧ ತಾಲೂಕುಗಳಿಂದ ಕ್ರೀಡಾಕೂಟದಲ್ಲಿ ಭಾಗವಹಿಸಲು ಬಂದಿರುವ ವಿದ್ಯಾರ್ಥಿಗಳು ಕ್ರೀಡೆಯ ಬಗ್ಗೆ ಹೆಚ್ಚಿನ ಆಸಕ್ತಿಯಿಂದ ಕ್ರೀಡೆಯಲ್ಲಿ ಪಾಲ್ಗೊಂಡು ರಾಜ್ಯ ಮಟ್ಟಕ್ಕೆ ಭಾಗವಹಿಸುವಂತೆ ಆಸಕ್ತಿಯಿಂದ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕೆಂದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ ನಾಗೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ ಸೌಭಾಗ್ಯ ಮಹದೇವ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಬಸವರಾಜ್, ಲೋಕೇಶ್, ಕುಮಾರಸ್ವಾಮಿ, ಪುಟ್ಟಸ್ವಾಮಿ, ಶಶಿಧರ್ ವೈಕುಂಠ, ವಿಜಯಕುಮಾರ್ ವಸಂತ ಕುಮಾರ್, ರತ್ನ ಚೈತ್ರ, ವೇದಾವತಿ, ಉಷಾಬಾಯಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ