Thursday, September 19, 2024

ಪ್ರಾಯೋಗಿಕ ಆವೃತ್ತಿ

ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸೂಚನೆ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮುಂದಿನ 15 ದಿನಗಳವರೆಗೆ ಪ್ರತಿ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಮಂಗಳವಾರ ರಾಜ್ಯಕ್ಕೆ ಸೂಚನೆ ನೀಡಿರುವುದಕ್ಕೆ ಮಂಡ್ಯ ಜಿಲ್ಲಾದ್ಯಂತ ಆಕ್ರೋಶ ಭುಗಿಲೆದ್ದಿದೆ.

ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ವಿವಾದಕ್ಕೆ ಕಾರಣವಾಗಿರುವ ಕಾವೇರಿ ನೀರು ಹಂಚಿಕೆ ವಿಚಾರವಾಗಿ ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ಸಿಡಬ್ಲ್ಯುಆರ್ಸಿ ಸಭೆಯಲ್ಲಿ ಸಮಿತಿ ಅಧಿಕಾರಿಗಳು, ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯದ ನೀರಾವರಿ ತಜ್ಞರು, ವಕೀಲರು ಮತ್ತು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರತಿ ದಿನ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಹರಿಸಲೇ ಬೇಕು ಅಂತ ಸಭೆಯಲ್ಲಿ ಆದೇಶಿಸಲಾಗಿದ್ದು, ಇನ್ನೂ 15 ದಿನಗಳ ಕಾಲ ಪ್ರತಿ ದಿನ ಕರ್ನಾಟಕದಿಂದ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಹರಿಸಲೇಬೇಕಾಗಿದೆ. ಈ ಸೂಚನೆ ಹೊರ ಬಿದ್ದ ನಂತರ ಜಿಲ್ಲೆಯಲ್ಲಿ ಜನರ ಆಕ್ರೋಶ ಭುಗಿಲೆದ್ದಿದೆ.

ಶ್ರೀರಂಗಪಟ್ಟಣದಲ್ಲಿ‌ ರೈತರು ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ನಮಗೆ ಕುಡಿಯಲು ನೀರಿಲ್ಲದಿರುವಾಗ ತಮಿಳುನಾಡಿಗೆ ಹರಿಸಿ‌ ಎಂದರೆ ಹೇಗೆ ಹರಿಸಲು‌ ಸಾಧ್ಯ. ಸರ್ಕಾರ ಮತ್ತೆ ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!