ಕನ್ನಡಿಗರ ಮೇಲಿನ ಹಿಂದಿ ಹೇರಿಕೆ ಹಾಗೂ ಕರ್ನಾಟಕದಲ್ಲಿ ಹಿಂದಿ ದಿವಸ ಆಚರಣೆಯನ್ನು ಪ್ರಾದೇಶಿಕ ಪಕ್ಷವಾದ ಜಾತ್ಯತೀತ ಜನತಾದಳ ತೀವ್ರವಾಗಿ ಖಂಡಿಸಿದೆ.
ಕಾಂಗ್ರೆಸ್ ಪಕ್ಷ ಶುರು ಮಾಡಿದ ಈ ಹಿಂದಿ ದಿವಸ ಆಚರಣೆಯನ್ನು ಹಿಂದಿಯೇತರ ರಾಜ್ಯಗಳಲ್ಲಿ ಆಚರಿಸುವುದನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಜೆಡಿಎಸ್ ಬರೆದುಕೊಂಡಿದೆ.
ಕನ್ನಡಿಗರ ಮೇಲಿನ ಹಿಂದಿ ಹೇರಿಕೆ ಹಾಗೂ ಕರ್ನಾಟಕದಲ್ಲಿ ಹಿಂದಿ ದಿವಸ ಆಚರಣೆಯನ್ನು ಪ್ರಾದೇಶಿಕ ಪಕ್ಷವಾದ ಜಾತ್ಯತೀತ ಜನತಾದಳ ತೀವ್ರವಾಗಿ ಖಂಡಿಸುತ್ತದೆ.
ಕಾಂಗ್ರೆಸ್ ಪಕ್ಷ ಶುರು ಮಾಡಿದ ಈ ಹಿಂದಿ ದಿವಸ ಆಚರಣೆಯನ್ನು ಹಿಂದಿಯೇತರ ರಾಜ್ಯಗಳಲ್ಲಿ ಆಚರಿಸುವುದನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ಪ್ರಾದೇಶಿಕ ಭಾಷೆಗಳ ಮೇಲಿನ ಈ ಮಲತಾಯಿ… pic.twitter.com/2ef4LY9Fze— Janata Dal Secular (@JanataDal_S) September 14, 2023
“>
ಪ್ರಾದೇಶಿಕ ಭಾಷೆಗಳ ಮೇಲಿನ ಈ ಮಲತಾಯಿ ಧೋರಣೆಯನ್ನು ನಾವು ಸಹಿಸುವುದಿಲ್ಲ. ಕನ್ನಡಿಗರಿಗೆ ಕನ್ನಡವೇ ರಾಷ್ಟ್ರೀಯ ಭಾಷೆ ಎಂದು ಜೆಡಿಎಸ್ ಹೇಳಿದೆ.
ಆದರೆ ಜೆಡಿಎಸ್ ಇತ್ತೀಚೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎನ್ನುವ ಬೆಳವಣಿಗೆಗಳು ನಡೆಯುತ್ತಿವೆ, ಒಂದು ಕಡೆ ಬಿಜೆಪಿ ಪಕ್ಷವು ಹಿಂದಿ ಹೇರಿಕೆ ಪರವಾಗಿದ್ದರೆ, ಅದರೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಜೆಡಿಎಸ್, ಹಿಂದಿ ಹೇರಿಕೆ ವಿರುದ್ದ ಧ್ವನಿ ಎತ್ತಿರುವುದು ಎಲ್ಲರಿಗೂ ಆಶ್ಚರ್ಯ ತಂದಿದೆ. ಮುಂದಿನ ದಿನಗಳಲ್ಲಿ ಯಾವ ರಾಜಕೀಯ ಬೆಳವಣಿಗೆಗಳು ನಡೆಯುತ್ತವೆ ಎಂಬುದನ್ನು ಕಾದು ನೋಡಬೇಕಾಗಿದೆ.




