Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಹಿಳಾ ರಾಜಕೀಯ ಸಬಲೀಕರಣ ಅತ್ಯವಶ್ಯಕ- ಅಂಜನಾ ಶ್ರೀಕಾಂತ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ, ನಿರುದ್ಯೋಗ ಮತ್ತು ಮಹಿಳಾ ಆಭದ್ರತೆಯನ್ನು ನಿಲ್ಲಿಸಲು ಮಹಿಳಾ ರಾಜಕೀಯ ಸಬಲೀಕರಣ ಅತ್ಯವಶ್ಯಕ ಎಂದು ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷ ಅಂಜನಾ ಶ್ರೀಕಾಂತ್ ಹೇಳಿದರು.

ಮಂಡ್ಯ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಸಂಸ್ಥಾಪನ ದಿನ ಮತ್ತು ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ಅವರು ಮಾತನಾಡಿದರು.

ವಿಶ್ವ ಮತ್ತು ದೇಶದಲ್ಲಿನ ಜನಸಂಖ್ಯೆಯಲ್ಲಿ ಅರ್ಧದಷ್ಟು ಜನ ಮಹಿಳೆಯರಿದ್ದು, ಪೂರ್ಣ ಹಕ್ಕುಗಳು ಹಾಗೂ ಸಮಾನ ಜವಾಬ್ದಾರಿ ಮತ್ತು ಸಮಾನ ಅವಕಾಶ ಲಭ್ಯವಾಗಬೇಕಿದೆ, ಮಹಿಳಾ ದೌರ್ಜನ್ಯ ನಿಲ್ಲಬೇಕಿದೆ ಎಂದು ಒತ್ತಾಯಿಸಿದರು.

ದೇಶದಲ್ಲಿ ಅಳುತ್ತಿರುವ ಕೋಮು ದ್ವೇಷ ಹಿಂಸಾಚಾರ ಮತ್ತು ದೃವೀಕರಣದ ವಿರುದ್ಧ ಹೋರಾಡುವ ಅಗತ್ಯವಿದೆ, ಧರ್ಮ, ಜಾತಿ,ಲಿಂಗ ಮತ್ತು ವರ್ಗದ ಆಧಾರದ ಮೇಲೆ ಸಮಾಜದಲ್ಲಿ ನಡೆಯುತ್ತಿರುವ ಎಲ್ಲಾ ಅನಿಷ್ಟಗಳನ್ನು ನಿಲ್ಲಿಸಲು ರಾಜಕೀಯ ಶಕ್ತಿ ಪಡೆದುಕೊಳ್ಳುವ ಅನಿವಾರ್ಯತೆ ಸೃಷ್ಟಿ ಆಗಬೇಕಿದೆ ಎಂದರು.

ಮಹಿಳೆಯರು ಪ್ರತಿ ಹಂತದಲ್ಲೂ ತಾರತಮ್ಯವನ್ನು ಎದುರಿಸುತ್ತಿದ್ದಾರೆ ರಾಜಕೀಯ ಪಕ್ಷಗಳಲ್ಲಿ ಉತ್ತಮ ಸ್ಥಾನಮಾನಗಳು ಲಭ್ಯವಾಗಬೇಕಿದೆ ಸಮಾನ ಅವಕಾಶ, ಸಮಾನ ಸ್ವಾತಂತ್ರ‍್ಯತೆ ಲಭಿಸುವ ನಿಟ್ಟಿನಲ್ಲಿ ಮಹಿಳಾ ರಾಜಕೀಯ ಸಬಲೀಕರಣದ ಕನಸನ್ನು ನನಸಾಗಿಸಿಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕಿದೆ ಎಂದರು.

ಕಾಂಗ್ರೆಸ್ ಪಕ್ಷವು ನೀಡಿರುವ ಸೂಚನೆಯಂತೆ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವ ಸಂಕಲ್ಪವನ್ನು ಮಾಡಬೇಕಿದೆ. ಪ್ರತಿ ಕಾಂಗ್ರೆಸ್ ಕಾರ್ಯಕರ್ತ ಮತಗಟ್ಟೆಯ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು. ಪ್ರತಿ ಮತದಾರರಿಗೂ ಕಾಂಗ್ರೆಸ್ ಪಕ್ಷದ ಯೋಜನೆಗಳನ್ನು ಮತ್ತು ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಶ್ರಮಪಡಬೇಕೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮಹಿಳಾ ಸಮಿತಿ ವತಿಯಿಂದ ಧ್ವಜರೋಹಣ ನೆರವೇರಿಸಲಾಯಿತು, ಸಂವಿಧಾನ ಪೀಠಿಕೆಯನ್ನು ಓದಲಾಯಿತು ಹಾಗೂ ಆ ಮಹಿಳಾ ಕಾಂಗ್ರೆಸ್ ಸಮಿತಿಯ ಸಂಸ್ಥಾಪನ ದಿನ ಪ್ರಯುಕ್ತ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಪೂರ್ಣಿಮಾ, ಗೀತಾ , ಶ್ರೀಧರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳಾದ ಶಕುಂತಲಾ, ವೀಣಾಶಂಕರ್ ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳಾದ ಅನುರಾಧ, ನಾಗಮಣಿ, ಮಮತಾ, ಗುಣ, ಶಶಿಕಲಾ, ಜ್ಯೋತಿ, ಇಂದಿರಾ, ನೀಲಾ, ಜಯಲಕ್ಷ್ಮಿ ಸೇರಿದಂತೆ ಹಲವರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ