Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಯೋಗಪಟುಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿಯು ಡಿ.ಆರ್.ಎಂ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಮಂಡ್ಯ ನಗರದಲ್ಲಿ ಸೆ.17ರಂದು ಯೋಗಪಟುಗಳಿಗೆ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದೆ.

ಮಂಡ್ಯ ನಗರದ ನೂರಡಿ ರಸ್ತೆಯಲ್ಲಿನ ಡಿ.ಆರ್.ಎಂ. ಆಸ್ಪತ್ರೆಯಲ್ಲಿ ಅಂದು ಬೆಳಗ್ಗೆ 7.30ಕ್ಕೆ ಶಿಬಿರ ಆರಂಭಗೊಳ್ಳಲಿದೆ. ಶಿಬಿರದಲ್ಲಿ ಉಚಿತವಾಗಿ ಇಸಿಜಿ, ಎಕೋ, ಬಿಪಿ, ಶುಗರ್, ಹಿಮೋಗ್ಲೋಬಿನ್, ಕ್ರಿಯಾಟಿನ್ ಟೆಸ್ಟ್ ಗಳನ್ನು ಮಾಡಲಾಗುತ್ತದೆ‌ ಎಂದು‌ ಸಮಿತಿಯ ಯೋಗ ಶಿಕ್ಷಕ ಕೆ.ಎಸ್. ನಂಜುಂಡಗುಪ್ತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನರಲ್ ಫಿಜಿಷಿಯನ್, ಮೂಳೆ, ಹೃದ್ರೋಗ ತಜ್ಞರು ಶಿಬಿರದಲ್ಲಿ ಭಾಗವಹಿಸಿ ತಪಾಸಣೆ ಮಾಡುವರು‌ ಎಂದಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ