Friday, September 20, 2024

ಪ್ರಾಯೋಗಿಕ ಆವೃತ್ತಿ

ಪ್ರಜಾಪ್ರಭುತ್ವದ ಉಳಿವಿಗೆ ಒಗ್ಗಟ್ಟಾಗಿ ಸರ್ವಾಧಿಕಾರಿ ಸರ್ಕಾರವನ್ನು ಕಿತ್ತೊಗೆಯಬೇಕು: ಖರ್ಗೆ

ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ಸರ್ವಾಧಿಕಾರಿ ಸರಕಾರವನ್ನು ಉರುಳಿಸಲು ಒಟ್ಟಾಗಬೇಕೆಂದು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗ್ರಹಿಸಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ಎರಡನೇ ದಿನ, ಪಕ್ಷದ ರಾಷ್ಟ್ರೀಯ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲಾ ಹಂತದ ನಾಯಕರು ಮತ್ತು ಕಾರ್ಯಕರ್ತರಲ್ಲಿ  ಜನರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದು ಹೇಳಿದ್ದಾರೆ.

ಇದು ನಮಗೆ ವಿಶ್ರಾಂತಿಯ ಸಮಯವಲ್ಲ, ಕಳೆದ 10 ವರ್ಷಗಳಲ್ಲಿ ಬಿಜೆಪಿಯ ಆಡಳಿತದಲ್ಲಿ ಸಾಮಾನ್ಯ ಜನರು ಎದುರಿಸುತ್ತಿರುವ ಸವಾಲುಗಳು ಹೆಚ್ಚಿವೆ. ಬಡವರು, ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಧಾನಿ ನಿರಾಕರಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ನಾವು ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ. ನಮ್ಮ ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಒಗ್ಗೂಡಿ ಈ ಸರ್ವಾಧಿಕಾರಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಅವರು ಹೇಳಿದರು.

ಇದೇ ವೇಳೆ ಮಾತನಾಡಿದ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿತಾಸಕ್ತಿಗೆ ಧಕ್ಕೆ ತರುವಂತಹ ಮಾದ್ಯಮಗಳ ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ತಪ್ಪಿಸಿ ಮತ್ತು ಸ್ವಯಂ ಸಂಯಮವನ್ನು ಕಾಪಾಡಿಕೊಳ್ಳುವಂತೆ  ಆಗ್ರಹಿಸಿದ್ದಾರೆ.

ನಾವು ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗಿಟ್ಟು ದಣಿವರಿಯಿಲ್ಲದೆ ಕೆಲಸ ಮಾಡಬೇಕು. ನಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷದ ಯಶಸ್ಸಿಗೆ ಆದ್ಯತೆ ನೀಡಬೇಕು. ಒಗ್ಗಟ್ಟು ಮತ್ತು ಶಿಸ್ತಿನ ಮೂಲಕ ಮಾತ್ರ ನಮ್ಮ ವಿರೋಧಿಗಳನ್ನು ಸೋಲಿಸಲು ಸಾಧ್ಯ. ಇದು ಕರ್ನಾಟಕದಲ್ಲಿ ಸ್ಪಷ್ಟವಾಗಿದೆ. ನಾವು ಗುರಿ ತಲುಪಲು ಒಗ್ಗಟ್ಟಿನಿಂದ ಇದ್ದೆವು ಮತ್ತು ಶಿಸ್ತಿನಿಂದ ಹೋರಾಡಿದೆವು ಎಂದು ಖರ್ಗೆ ಹೇಳಿದರು.

CWC 39 ಸಾಮಾನ್ಯ ಸದಸ್ಯರನ್ನು ಹೊಂದಿದ್ದು 32 ಖಾಯಂ ಆಹ್ವಾನಿತರು ಮತ್ತು 13 ವಿಶೇಷ ಆಹ್ವಾನಿತರು ಇದರಲ್ಲಿ ಸೇರಿದ್ದಾರೆ.  ಸಭೆಯಲ್ಲಿ 15 ಮಹಿಳಾ ಪ್ರತಿನಿಧಿಗಳು ಮತ್ತು ಶಶಿ ತರೂರ್, ಸಚಿನ್ ಪೈಲಟ್ ಮತ್ತು ಗೌರವ್ ಗೊಗೊಯ್‌ರಂತಹ ನಾಯಕರು ಕೂಡ ಸೇರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!