Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾವೇರಿ ಸಂಕಷ್ಟ| ನಾಳೆ ದೆಹಲಿಯಲ್ಲಿ ಕರ್ನಾಟಕದ ಜನಪ್ರತಿನಿಧಿಗಳ ಮಹತ್ವದ ಸಭೆ

ಕಾವೇರಿ ನದಿ ನೀರು ಹಂಚಿಕೆ ವಿವಾದ, ರಾಜ್ಯದ ಯೋಜನೆಗಳು ಹಾಗೂ ಬರಪರಿಹಾರ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್‌ನಲ್ಲಿ ನಾಳೆ (ಸೆ.20) ಬೆಳಗ್ಗೆ ರಾಜ್ಯದ ಜನಪ್ರತಿನಿಧಿಗಳ ಮಹತ್ವದ ಸಭೆ ಆಯೋಜಿಸಲಾಗಿದೆ.

ಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರು, ಲೋಕಸಭಾ ಸದಸ್ಯರು ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಕರ್ನಾಟಕದ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಅವರು ಈಗಾಗಲೇ ನವದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದು ನಾಳೆ ನಡೆಯಲಿರುವ ಸಭೆಗೆ ಪೂರ್ವಭಾವಿಯಾಗಿ ಚರ್ಚೆಯನ್ನು ಕೂಡ ಮಾಡುತ್ತಿದ್ದಾರೆ.

ಈ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ
ಡಿ‌‌.ಕೆ ಶಿವಕುಮಾರ್ ಅವರು ಇಂದು ಸಂಜೆ ನವದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!