Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಹಿಳಾ ಮೀಸಲಾತಿ ಮಸೂದೆ| ಮಹಿಳೆಯರನ್ನು ಮೂರ್ಖರನ್ನಾಗಿಸುವ ತಂತ್ರ – ಅತಿಶಿ ಟೀಕೆ

ಮಹಿಳಾ ಮೀಸಲಾತಿ ಮಸೂದೆಯು 2024ರ ಲೋಕಸಭೆ ಚುನಾವಣೆಗೆ ಮುನ್ನ ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆಯಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕಿ ಅತಿಶಿ ಅವರು ಹೇಳಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಸರ್ಕಾರ ಮಂಗಳವಾರ ಮಂಡಿಸಿದ್ದು, ಪಕ್ಷಗಳ ನಡುವೆ ಒಮ್ಮತದ ಕೊರತೆಯಿಂದಾಗಿ 27 ವರ್ಷಗಳಿಂದ ಬಾಕಿ ಉಳಿದಿರುವ ಮಸೂದೆಯನ್ನು ಪುನರುಜ್ಜೀವನಗೊಳಿಸಲಾಗಿದೆ.

ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, ಬಿಜೆಪಿಗೆ ಮಹಿಳೆಯರ ಯೋಗಕ್ಷೇಮ ಮತ್ತು ಕಲ್ಯಾಣದಲ್ಲಿ ಆಸಕ್ತಿ ಇಲ್ಲ. ಮಸೂದೆಯ ನಿಬಂಧನೆಗಳನ್ನು ಓದಿದರೆ ಇದೊಂದು ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆ ಎಂದು ಮನವರಿಕೆಯಾಗುತ್ತದೆ ಎಂದು ಹೇಳಿದ್ದಾರೆ.

ಕ್ಷೇತ್ರ ಮರುವಿಂಗಡಣೆ ಬಳಿಕ ಮಸೂದೆ ಜಾರಿಗೆ ಬರಲಿದೆ. ಮಸೂದೆ ಜಾರಿ ಬಳಿಕ 15 ವರ್ಷಗಳವರೆಗೆ ಜಾರಿಯಲ್ಲಿರಲಿದೆ. ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಮೀಸಲಾದ ಕ್ಷೇತ್ರಗಳು ಬದಲಾಗುತ್ತವೆ. ಮಹಿಳಾ ಮೀಸಲಾತಿ ಮಸೂದೆಯಲ್ಲಿ ಕ್ಷೇತ್ರ ಮರು ವಿಂಗಡಣೆ ಮತ್ತು ಜನಗಣತಿ ನಿಬಂಧನೆಗಳನ್ನು ಸೇರಿಸಿದ್ದೇಕೆ? ಇದರರ್ಥ ಮುಂಬರುವ 2024ರ ಲೋಕಸಭಾ ಚುನಾವಣೆಗೂ ಮುನ್ನ ಈ ಮಸೂದೆ ಜಾರಿಯಾಗುವುದಿಲ್ಲ ಎಂದು ಅತಿಶಿ ಹೇಳಿದ್ದಾರೆ.

ಕ್ಷೇತ್ರ ಮರು ವಿಂಗಡಣೆ ಮತ್ತು ಗಣತಿ ನಿಬಂಧನೆಗಳನ್ನು ತೆಗೆದು ಹಾಕಿ 2024ರ ಲೋಕಸಭಾ ಚುನಾವಣೆಗೂ ಮುನ್ನವೇ ಮಹಿಳಾ ಮೀಸಲಾತಿ ಮಸೂದೆ ಜಾರಿ ಮಾಡಬೇಕು ನಾವು ಒತ್ತಾಯಿಸುತ್ತೇವೆ ಎಂದು ಎಎಪಿ ನಾಯಕಿ ಅತಿಶಿ ಆಗ್ರಹಿಸಿದ್ದಾರೆ.

ಲೋಕಸಭೆಯ ವಿಶೇಷ ಅಧಿವೇಶನದ ಎರಡನೇ ದಿನವಾದ ಇಂದು ಸಂಸತ್ತಿ ಹೊಸ ಕಟ್ಟಡದಲ್ಲಿ ಮಹಿಳಾ ಮೀಸಲಾತಿ ಬಿಲ್‌ ಮಂಡನೆ ಮಾಡಲಾಗಿದೆ. ಬಿಲ್‌ಗೆ ಕಾಂಗ್ರೆಸ್ ಕೂಡ ಬೆಂಬವನ್ನು ಸೂಚಿಸಿದೆ. ಬಿಲ್‌ ಪ್ರಕಾರ ರಾಜ್ಯಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ಸಿಗಲಿದೆ.

ಈ ಕುರಿತು ಸಂಸತ್ತಿನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ನಾರಿ ಶಕ್ತಿ ವಂದನ ಅಧಿನಿಯಮ’ ಮಸೂದೆಯು ಹೆಚ್ಚಿನ ಮಹಿಳೆಯರು ಸಂಸತ್ತು ಮತ್ತು ವಿಧಾನಸಭೆಗಳ ಸದಸ್ಯರಾಗುವುದಕ್ಕೆ ಹೆಚ್ಚಿನ ಅವಕಾಶ ನೀಡುತ್ತದೆ ಎಂದು ಹೇಳಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!