Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾವೇರಿ ಸಂಕಷ್ಟ| ಮತ್ತೇ 18 ದಿನ 3,000 ಕ್ಯೂಸೆಕ್ ನೀರು ಬಿಡಲು ಆದೇಶ

ಕಾವೇರಿ ನದಿ ನೀರು ಹಂಚಿಕೆಯಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಮಂಗಳವಾರ ದೆಹಲಿಯಲ್ಲಿ ಸಭೆ ಸೇರಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿಯು 18 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸ್ಸು ಮಾಡಿದೆ. ಅಂದರೆ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 15ರ ವರೆಗೆ ನೀರು ಹರಿಸುವಂತೆ ಶಿಫಾರಸು ಮಾಡಿದೆ.

ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶದಿಂದ ಕಾವೇರಿ ಬರಿದಾಗಲಿದೆ. ಇವತ್ತಿನ ಆದೇಶದಿಂದ ಜಲಾಶಯವೇ ಖಾಲಿಯಾಗುವ ಆತಂಕ ಎದುರಾಗುವ ಅಪಾಯವಿದೆ.

ಕಾವೇರಿ ನದಿ ನೀರು ನಿಯಂತ್ರ ಮಂಡಳಿ ಆದೇಶವನ್ನು ಪ್ರಶ್ನಿಸಿಸುವುದಾಗಿ ಕರ್ನಾಟಕ ಸರ್ಕಾರ ಹೇಳಿದೆ. ಆದರೆ ಈಗಾಗಲೇ ಕರ್ನಾಟಕದ ಎಲ್ಲಾ ವಾದಗಳಿಗೂ ಹಿನ್ನಡೆಯಾಗಿದೆ. ಹಾಗಾಗಿ ಸರ್ಕಾರ ಮುಂದೆ ಯಾವ ನಿರ್ಧಾರ ಕೈಗೊಳ್ಳುತ್ತದೋ ಕಾದು ನೋಡಬೇಕಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!