Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶುಕ್ರವಾರ (ಸೆ.29) ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ಕುಮಾರ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಸಂಘಟನೆಗಳು ಕರೆಕೊಟ್ಟಿರುವ ಬಂದ್‌ನಿಂದಾಗಿ ಸಾರಿಗೆ ಮತ್ತು ಖಾಸಗಿ ಬಸ್‌ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ರಜೆಯ ಕೊರತೆಯನ್ನು ಮುಂದಿನ ರಜಾ ದಿನಗಳಲ್ಲಿ ಸರಿದೂಗಿಸಿಕೊಳ್ಳುವಂತೆ ಸಂಬಂಧಿಸಿದ ಶಿಕ್ಷಣ ಇಲಾಖೆಗೆ ಸೂಚಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ