Thursday, November 19, 2026

ಪ್ರಾಯೋಗಿಕ ಆವೃತ್ತಿ

ಪೈಪ್ ಲೈನ್ ಅಳವಡಿಕೆ ಕಾಮಗಾರಿಗೆ ದರ್ಶನ್ ಪುಟ್ಟಣ್ಣಯ್ಯ ಭೂಮಿಪೂಜೆ

ಪಾಂಡವಪುರ ತಾಲೂಕಿನ ಹಳೇಬೀಡು, ಅನೂನಹಳ್ಳಿ, ಬೋರಾಪುರ ಹಾಗೂ ಸಂಗಾಪುರ ಗ್ರಾಮಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಶುದ್ಧ ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆ ಕಾಮಗಾರಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿ, ನಾಲ್ಕು ಗ್ರಾಮಗಳಿಂದ ೧.೫೦ ಕೋಟಿ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಯ ಪೈಪ್‌ಲೈನ್ ಅಳವಡಿಕೆಗಾಗಿ ಚಾಲನೆ ನೀಡಲಾಗಿದೆ. ಈ ಯೋಜನೆಯಿಂದ ಪ್ರತಿ ಮನೆಗಳಿಗೂ ಶುದ್ಧ ಕುಡಿಯುವ ನೀರು ದೊರಕುತ್ತದೆ. ಕಾಮಗಾರಿ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ಕಳಪೆ ಕಾಮಗಾರಿ ನಿರ್ವಹಿಸದೆ ಉತ್ತಮ ಕೆಲಸ ಮಾಡಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲಿ ಎಂಬುದು ನಮ್ಮ ಆಶಯವಾಗಿದೆ ಎಂದರು.

ಈ ವೇಳೆ ಕೆಪಿಸಿಸಿ ಸದಸ್ಯ ಎಚ್.ತ್ಯಾಗರಾಜು, ಕುಡಿಯುವ ನೀರು ನೈರ್ಮಲ್ಯಕರಣ ಇಲಾಖೆ ಎಇಇ ಮಹದೇವಸ್ವಾಮಿ, ಪಂಚಾಯತ್ ರಾಜ್ ಇಲಾಖೆ ಎಇ ಕುಮಾರ್, ರೈತಸಂಘದ ತಾಲೂಕು ಮಹಿಳಾಧ್ಯಕ್ಷೆ ಕೋಕಿಲಾ ಜ್ಞಾನೇಶ್, ಗುತ್ತಿಗೆದಾರ ಇಂದ್ರ, ನಿಜಗುಣ, ಕುಮಾರ್, ನಟರಾಜು, ಹಳೇಬೀಡು ತಿಮ್ಮೇಗೌಡ, ರೈತಸಂಘದ ಮುಖಂಡರಾದ ಹೊಸಕೋಟೆ ವಿಜಯಕುಮಾರ್, ಕಾಡೇ‌ನಹಳ್ಳಿ ಚಂದ್ರು, ನರಹಳ್ಳಿ ಜ್ಞಾನೇಶ್, ಗ್ರಾ.ಪಂ ಅಧ್ಯಕ್ಷರಾದ ಧನಂಜಯ, ವಿ.ಪ್ರಕಾಶ್ ಹಾಗೂ ಗ್ರಾಪಂ ಸದಸ್ಯರು, ಗ್ರಾನಸ್ಥರು ಇತರರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ