Friday, September 20, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ ದಸರಾ ಅರ್ಥಪೂರ್ಣವಾಗಿರಲಿ: ಶಾಸಕ ರಮೇಶ್ ಬಾಬು

ಶ್ರೀರಂಗಪಟ್ಟಣ ದಸರಾ ಉತ್ಸವದಲ್ಲಿ ನಡೆಯುವ ಕಾರ್ಯಕ್ರಮಗಳು ಅರ್ಥಪೂರ್ಣವಾಗಿರಲಿ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ತಿಳಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.

ದಸರಾ ಮ್ಯಾರಥಾನ್ ಓಟವು ಅಕ್ಟೋಬರ್ 16ರಂದು ಬೆಳಿಗ್ಗೆ 7 ಗಂಟೆಗೆ ತಾಲೂಕು ಕ್ರೀಡಾಂಗಣದಿಂದ ಕರಿಘಟ್ಟದವರೆಗೆ ನಡೆಯಲಿದೆ, ಇದಕ್ಕೆ ಸಂಬಂಧಿಸಿದಂತೆ ಸ್ಪರ್ಧಾರ್ಥಿಗಳು ಅಕ್ಟೋಬರ್ 15 ರವರೆಗೂ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು. ಇದರಲ್ಲಿ 300 ಸ್ಪರ್ಧಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ.ಮಹಿಳೆಯರಿಗೆ ಕಾರ್ಯಕ್ರಮ ನೀಡಲು ಮಹಿಳಾ ದಸರಾ, ರೈತ ದಸರಾ, ಮಕ್ಕಳ ದಸರಾ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದರು.

ಅಕ್ಟೋಬರ್ 17ರ ಮಧ್ಯಾಹ್ನ 2 ಗಂಟೆಗೆ ಪಾರಂಪರಿಕ ಮಟ್ಟಿ ಕುಸ್ತಿ ಪಂದ್ಯಾವಳಿಗಳನ್ನು ಸಂದಿಲ್ ಕೋಟೆಯಲ್ಲಿ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಿ, ಅಕ್ಟೋಬರ್ 18 ರಂದು ಮಹಿಳೆಯರಿಗೋಸ್ಕರ ರಂಗೋಲಿ ಸ್ಪರ್ಧೆ ಮತ್ತು ಚಮಚದಲ್ಲಿ ನಿಂಬೆಹಣ್ಣು ಇಟ್ಟು ಓಡುವ ಸ್ಫರ್ಧೆ ಆಯೋಜಿಸಿ ಎಂದರು.

ಹಾಲು ಕರೆಯುವ ಸ್ಪರ್ಧೆ ಅಕ್ಟೋಬರ್ 18ರಂದು ಬೆಳಿಗ್ಗೆ 6 ಗಂಟೆಗೆ ಮತ್ತು ಸಂಜೆ 5 ಗಂಟೆಯ ಸಮಯದಲ್ಲಿ ನಡೆಯಲಿದೆ ಇದರಲ್ಲಿ ಹೆಚ್ಚು ಜನರು ಭಾಗವಹಿಸುವಂತೆ ಪ್ರೋತ್ಸಾಹಿಸಿ ಎಂದರು .

ದಸರಾ ಉತ್ಸವಕ್ಕೆ ಭಾಗವಹಿಸುವ ಎಲ್ಲ ಸಾರ್ವಜನಿಕರಿಗೂ ಮಧ್ಯಾಹ್ನದ ಉಪಹಾರವನ್ನು ರಂಗನಾಥ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ ಜೊತೆಗೆ ಕುಡಿಯುವ ನೀರು ಪೂರೈಕೆ ಮಾಡಲು ಅಲ್ಲಿನ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!