Thursday, November 19, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು| ಭಗವಾನ್ ಹೇಳಿಕೆ ಖಂಡಿಸಿ ಪ್ರತಿಭಟನೆ

ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರೊ.ಕೆ.ಎಸ್.ಭಗವಾನ್ ನಡೆಯನ್ನು ಖಂಡಿಸಿ ಒಕ್ಕಲಿಗರ ಪರ ಸಂಘಟನೆಗಳು ಮದ್ದೂರು ಪಟ್ಟಣದಲ್ಲಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದವು

ಮದ್ದೂರು ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ಕೃಷ್ಣ ಮಾತನಾಡಿ, ಒಕ್ಕಲಿಗ ಸಮುದಾಯವನ್ನು ಅವಹೇಳನ ಮಾಡಿರುವ ಕೆ.ಎಸ್. ಭಗವಾನ್ ಅವರಿಗೆ ನೀಡಲಾಗಿರುವ ಭದ್ರತೆಯನ್ನು ಸರ್ಕಾರ ವಾಪಸ್ ಪಡೆಯಬೇಕು, ಕೂಡಲೇ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಪಿ ಶಿವಪ್ಪ, ಉಪಾಧ್ಯಕ್ಷ ಶಂಕರೇಗೌಡ, ನಿರ್ದೇಶಕರಾದ ರವಿಕುಮಾರ್, ತಿಪ್ಪೂರು ರಾಜೇಶ್, ರಾಮಚಂದ್ರು, ಕುಮಾರ್, ಮಿಲಿಟರಿ ಕುಮಾರ್, ನವೀನ, ನ.ಲಿ ಕೃಷ್ಣ, ನಾರಾಯಣ್, ಗೊರವನಹಳ್ಳಿ ಪ್ರಸನ್ನ, ರವಿ ಚನ್ನಸಂದ್ರ, ದೇವಕುಮಾರ್, ಶ್ರೀನಿವಾಸ್, ಅಂಬರೀಶ್ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ