Thursday, September 19, 2024

ಪ್ರಾಯೋಗಿಕ ಆವೃತ್ತಿ

ಅ.26ರಿಂದ ಪಾರಂಪರಿಕ ವೈದ್ಯರ ಸಮ್ಮೇಳನ: ಮಂಜುನಾಥ್

ಪಾರಂಪರಿಕ ವೈದ್ಯ ಪರಿಷತ್ತಿನಿಂದ ನಾಗಮಂಗಲ ತಾಲೂಕು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ಅಕ್ಟೋಬರ್ 26 ರಿಂದ ಮೂರು ದಿನಗಳ ಕಾಲ ಪಾರಂಪರಿಕ ವೈದ್ಯರ ರಾಷ್ಟ್ರೀಯ ಮತ್ತು 14ನೇ ರಾಜ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಪರಿಷತ್ತಿನ ಸಂಚಾಲಕ ಹಾಗೂ ಭಜರಂಗ ಸೇನೆ ರಾಜ್ಯಾಧ್ಯಕ್ಷ ಮಂಜುನಾಥ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋ‍ಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ರಾಜ್ಯದ ನಾನಾ ಭಾಗಗಳಿಂದ ಸುಮಾರು 2,500 ಮಂದಿ ಹಾಗೂ ನೆರೆ ರಾಜ್ಯಗಳಿಂದ 500 ಜನರು ಸೇರಿದಂತೆ 3000 ಪಾರಂಪರಿಕ ವೈದ್ಯರು ಭಾಗವಹಿಸುವರು. ಇವರ ಮಾಹಿತಿಯುಳ್ಳ ಮಾಹಿತಿ ಕೋಶವನ್ನು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಬಿಡುಗಡೆ ಮಾಡುವರು ಎಂದರು.

ಅ.26ರಂದು ಬೆಳಿಗ್ಗೆ 10.30 ಗಂಟೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಮ್ಮೇಳನವನ್ನು ಉದ್ಘಾಟಿಸುವರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು. ಪಾರಂಪರಿಕ ವೈದ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಜಿ. ಮಹದೇವಯ್ಯ ಅಧ್ಯಕ್ಷತೆ ವಹಿಸುವರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಭಾಗವಹಿಸುವರು ಎಂದರು.

ಗದಗ್ ಜಿಲ್ಲೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೋ ವಿಷ್ಣುಕಾಂತ ಚಟಪಲ್ಲಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆಯುಷ್ ಇಲಾಖೆಯ ಆಯುಕ್ತೆ ಡಾ.ಲೀಲಾವತಿ, ರಾಜ್ಯ ಔಷಧ ಗಿಡಮೂಲಿಕಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ವಿ. ಸುದರ್ಶನ್, ಕರ್ನಾಟಕ ಜೀವವೈವಿಧ್ಯ ಮಂಡಳಿಯ ಸದಸ್ಯ ಕಾರ್ಯದರ್ಶಿ ಜಗತ್ ರಾವ್, ಪಾರಂಪರಿಕ ವೈದ್ಯ ಪರಿಷತ್ತಿನ ಸಂಸ್ಥಾಪಕರಾದ ಶ್ರೀಕಂಠಯ್ಯ, ಹರಿರಾಮಮೂರ್ತಿ, ಡಾ. ಸತ್ಯನಾರಾಯಣ ಭಟ್ ಭಾಗವಹಿಸುವರು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಕರ್ನಾಟಕ ವೈದ್ಯ ಪರಿಷತ್ತಿನ ಸದಸ್ಯರಾದ ಏನ್.ತಮ್ಮಣ್ಣ, ಎಂ.ಇಂದುಕುಮಾರ್, ಶಿವಕುಮಾರ್, ಸಿಂಧು, ಮಂಗಳ ರಾಜ್, ವಿನಯ್ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!