Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾವೇರಿ ಹೋರಾಟಕ್ಕೆ ರೈತರ ಬೆಂಬಲ: ಎತ್ತಿನಗಾಡಿ- ಟ್ರಾಕ್ಟರ್ ಮೆರವಣಿಗೆ

ಕಳೆದ 46 ದಿನಗಳಿಂದ ಮಂಡ್ಯದಲ್ಲಿ ನಡೆಯುತ್ತಿರುವ ಕಾವೇರಿ ಹೋರಾಟದಲ್ಲಿ ಶುಕ್ರವಾರ ಇಂಡುವಾಳು, ಸಿದ್ದಯ್ಯನಕೊಪ್ಪಲು, ಸುಂಡಹಳ್ಳಿ, ಕಿರಗಂದೂರು ಹಾಗೂ ಮೊಳೆ ಕೊಪ್ಪಲು ಗ್ರಾಮದ ರೈತರು ಎತ್ತಿನಗಾಡಿ, ಟ್ರಾಕ್ಟರ್, ಬೈಕ್ ಗಳಲ್ಲಿ ಆಗಮಿಸಿ ಬೆಂಬಲ ವ್ಯಕ್ತಪಡಿಸಿದರು.

ತಮ್ಮ ಗ್ರಾಮಗಳಿಂದ ಟ್ರಾಕ್ಟರ್, ಎತ್ತಿನಗಾಡಿಗಳ ಮೂಲಕ ಮಂಡ್ಯನಗರಕ್ಕೆ ಆಗಮಿಸಿದ ರೈತರು, ಮಂಡ್ಯನಗರದ ಸಂಜಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ವಾಹನ ಸಂಚಾರಕ್ಕೆ ಅಡ್ಡಿಪಡಿಸಿದದರು. ಕೇಂದ್ರ – ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ನಂತರ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಧರಣಿ ಸ್ಥಳಕ್ಕೆ ತೆರಳಿ ನಿರಂತರ ಧರಣಿಯಲ್ಲಿ ಭಾಗಿಯಾದ ರೈತ ಸಮೂಹ ಜಲಾಶಯಗಳಿಂದ ನೆರೆ ರಾಜ್ಯಕ್ಕೆ ನಿರಂತರ ನೀರು ಹರಿಸುವ ಮೂಲಕ ಅಣೆಕಟ್ಟೆಯನ್ನು ಬರಿದು ಮಾಡಲಾಗುತ್ತಿದೆ, ಈ ಕೂಡಲೇ ನೆರೆ ರಾಜ್ಯಕ್ಕೆ ಹರಿಸುತ್ತಿರುವ ನೀರು ಸ್ಥಗಿತ ಮಾಡಬೇಕು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಪರಿಹಾರ ರೂಪಿಸಬೇಕು, ಸಂಕಷ್ಟ ಸನ್ನಿವೇಶದಲ್ಲಿ ಅನುಕೂಲವಾಗುವಂತೆ ಸಂಕಷ್ಟ ಸೂತ್ರ ರೂಪಿಸಬೇಕು ಎಂದು ಒತ್ತಾಯಿಸಿದರು.

ಹೋರಾಟದಲ್ಲಿ ಇಂಡುವಾಳು ಗ್ರಾಮದ ರೈತ ಮುಖಂಡ ಚಂದ್ರಶೇಖರ್, ಇ.ಬಸವರಾಜು, ಕೃಷ್ಣೆಗೌಡ, ಉಮಾ ಶಂಕರ್, ದೇವೇಗೌಡ, ಸಿದ್ದಯ್ಯನ ಕೊಪ್ಪಲು ಗ್ರಾಮದ ರಮೇಶ್ ರಾಜು, ನಟೇಶ್, ತಮ್ಮೇಗೌಡ, ತಮ್ಮಣ್ಣ, ಶಿವಣ್ಣ, ನಾಗರಾಜು, ಸಿದ್ದರಾಮು, ನಂಜೇಗೌಡ, ಸುಂಡಹಳ್ಳಿ ಗ್ರಾಮದ ಶಿವಸ್ವಾಮಿ, ಸಿದ್ದಲಿಂಗಯ್ಯ, ದೇವರಾಜು, ಮೊಳೆಕೊಪ್ಪಲು ಗ್ರಾಮದ ಅಂದಾನಿ, ಬೆಟ್ಟೇಗೌಡ, ಶಂಕರ್, ಶಿವರಾಮ, ಹೊನ್ನಪ್ಪ, ಕಿರಗಂದೂರು ಗ್ರಾಮದ ಸಿದ್ದಯ್ಯ,ಕರಿಯಪ್ಪ, ಚಿಕ್ಕಯ್ಯ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!