Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಶಾಸಕರಿಂದ ಸೇತುವೆ ಕಾಮಗಾರಿ ಪರಿಶೀಲನೆ

ಮಳವಳ್ಳಿ ಪಟ್ಟಣದ ಹೃದಯ ಭಾಗದ ಅನಂತರಾಂ ವೃತ್ತದಲ್ಲಿ ಕೆಸಿಫ್ ನಿಂದ ನಡೆಯುತ್ತಿರುವ ಸೇತುವೆ ಕಾಮಗಾರಿ ಸ್ಥಳಕ್ಕೆ ಶನಿವಾರ ಶಾಸಕ ಪಿ.ಎಂ ನರೇಂದ್ರಸ್ವಾಮಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ 8-10 ದಿನಗಳ ಹಿಂದೆಯೇ ಕಾಮಗಾರಿ ಪ್ರಾರಂಭವಾಗಿದ್ದರೂ ತ್ವರಿತಗತಿಯಲ್ಲಿ ನಡೆಯದಿರುವುದನ್ನು ಗಮನಿಸಿದ ಶಾಸಕರು ಇಂದು ಭೇಟಿ ನೀಡಿ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಬಗ್ಗೆ ಮಾಹಿತಿ ಪಡೆದರು.

ಪಟ್ಟಣದಲ್ಲಿ ಮಳೆಯಾದಾಗ ಈ ಸ್ಥಳದಲ್ಲಿ ನೀರು ನಿಂತು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿತ್ತು. ಇದರಿಂದಾಗಿ ಹೊಸದಾಗಿ ಸೇತುವೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆಯುಧಪೂಜೆ, ದಸರಾ ಹಬ್ಬ ಮುಗಿದ ನಂತರ ಇದರ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದೆಂದು ಭರವಸೆ ನೀಡಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ