Thursday, September 19, 2024

ಪ್ರಾಯೋಗಿಕ ಆವೃತ್ತಿ

ಚಿಕ್ಕಬಳ್ಳಾಪುರ| ಲಾರಿ- ಟಾಟಾ ಸುಮೋ ನಡುವೆ ಭೀಕರ ಅಪಘಾತ: 13 ಜನ ದುರ್ಮರಣ

ಸಿಮೆಂಟ್ ಬಲ್ಕರ್ ಲಾರಿಗೆ ಟಾಟಾ ಸುಮೋ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರ ಚಿತ್ರಾವತಿ ಬಳಿ ನಡೆದಿದೆ.

ಟಾಟಾ ಸುಮೊ ಬಾಗೇಪಲ್ಲಿಯಿಂದ ಬೆಂಗಳೂರು ಕಡೆ ತೆರಳವಾಗ ರಸ್ತೆಬಂದಿ ನಿಂತಿದ್ದ ಲಾರಿಗೆ ಹಿಂಬದಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ದಟ್ಟ ಮಂಜು ಹಿನ್ನೆಲೆಯಲ್ಲಿ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ ಎಂದು ಹೇಳಲಾಗಿದೆ. ಅಪಘಾತದ ತೀವ್ರತೆಗೆ ಟಾಟಾ ಸುಮೊ ಮುಂದಿನ ಭಾಗ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಒಟ್ಟು 13 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್​.ನಾಗೇಶ್ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಮಗು, ಮೂವರು ಮಹಿಳೆಯರು ಸೇರಿ 13 ಜನರು ಮೃತಪಟ್ಟಿದ್ದಾರೆ. ಮೃತರು ಆಂಧ್ರದ ಗೊರಂಟ್ಲ ನಿವಾಸಿಗಳು. ಇವರು ಟಾಟಾ ಸುಮೊದಲ್ಲಿ ಆಂಧ್ರದ ಗೋರಂಟ್ಲದಿಂದ ಬೆಂಗಳೂರಿನ ಬೊಮ್ಮನಹಳ್ಳಿಗೆ ತೆರಳುತ್ತಿದ್ದರು. 7 ಸೀಟಿನ ಸಾಮರ್ಥ್ಯದ ಟಾಟಾ ಸುಮೊದಲ್ಲಿ 13 ಜನ ಪ್ರಯಾಣ ಪ್ರಯಾಣಿಸುತ್ತಿದ್ದರು ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!