Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ವಾಲ್ಮೀಕಿ ಮಹರ್ಷಿ ಜಯಂತಿ ಆಚರಣೆ

ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಶ್ರೀ ವಾಲ್ಮೀಕಿ ಮಹರ್ಷಿ ಜಯಂತೋತ್ಸವ ಆಚರಿಸಲಾಯಿತು.

ಕಾರ್ಯಕ್ರಮವನ್ನು ತಹಸೀಲ್ದಾರ್ ಲೋಕೇಶ್ ಉದ್ಘಾಟಿಸಿ ಮಾತನಾಡಿ, ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕು, ಆಗ ಮಾತ್ರ ಮುಂದೆ ಬರಲು ಸಾಧ್ಯ, ವಾಲ್ಮೀಕಿಯವರ ರಾಮಾಯಣ ಕಾವ್ಯದ ಅಂಶಗಳನ್ನು ನಾವೆಲ್ಲರೂ ತಿಳಿದುಕೊಂಡು ಉತ್ತಮ ಜೀವನ ನಡೆಸಬೇಕಾಗಿದೆ ಎಂದರು.

ರಾಮಾಯಣವು ಎಂದೆಂದೂ ಪ್ರಸ್ತುತವಾಗಿ ಪವಿತ್ರವಾದ ಅಮರ ಮಹಾಕಾವ್ಯವನ್ನು ಮಹರ್ಷಿ ವಾಲ್ಮೀಕಿ ಅವರು ಜನತೆಗೆ ನೀಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ಮಹರ್ಷಿ ವಾಲ್ಮೀಕಿಯವರ ಸ್ಮರಣೆ, ಅವರಿಗೆ ಗೌರವ ನೀಡುವ ಕಾರ್ಯ ಪ್ರತಿನಿತ್ಯ, ಪ್ರತಿಕ್ಷಣವೂ ನಡೆಯಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಚಿಕ್ಕ ಬೋರಯ್ಯ, ಸಮಾಜ ಕಲ್ಯಾಣಾಧಿಕಾರಿ ಜರ್ನಾದನ್, ಬಿಇಒ ಚಂದ್ರಪಾಟೀಲ್, ವಾಲ್ಮೀಕಿ ಸಂಘ ಅಧ್ಯಕ್ಷ ಡಾ.ಚಂದ್ರಶೇಖರ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಬಿಸಿಎಂ ಅಧಿಕಾರಿ ನಾಗರಾಜು, ಇನ್ಸ್ ಪೆಕ್ಟರ್ ರವಿಕುಮಾರ್ ಸೇರಿದಂತೆ ಹಲವರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!