Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನೀರಿನ ದರ ಇಳಿಕೆಗೆ ಸಿಎಂ ಸೂಚನೆ: ನಗರಸಭಾ ಸದಸ್ಯರ ಸ್ವಾಗತ

ಮಂಡ್ಯ ನಗರದ ಕುಡಿಯುವ ನೀರಿನ ದರ ಪರಿಷ್ಕರಣೆ ಮಾಡುವಂತೆ ಖುದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ ಎಂದು ಮಂಡ್ಯ ನಗರಸಭೆಯ ಕಾಂಗ್ರೆಸ್ ಸದಸ್ಯರು ತಿಳಿಸಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಸುದ್ದಿಗೋ‍ಷ್ಠಿಯಲ್ಲಿ ಮಾತನಾಡಿದ ನಗರಸಭಾ ಸದಸ್ಯ ಶ್ರೀಧರ್, ಮಂಡ್ಯ ನಗರದ ಕುಡಿಯುವ ನೀರಿನ ದರ ಪರಿಷ್ಕರಣೆ ಮಾಸಿಕ ರೂ. 120 ಇದ್ದ ದರವನ್ನು ರೂ. 282ಗೆ ಅವೈಜ್ಞಾನಿಕವಾಗಿ ಏರಿಕೆ ಮಾಡಿದ್ದನ್ನು 2018 ರಿಂದಲೇ ನಾವು ವಿರೋಧಿಸಿಕೊಂಡು ಬಂದಿದ್ದವು, ಅಲ್ಲದೇ 2019, 2020 ಹಾಗೂ 2022 ರ ಕೌನ್ಸಿಲ್ ಸಭೆಯಲ್ಲಿ ಗೃಹ ಬಳಕೆಗೆ ₹220, ಗೃಹೇತರ ಬಳಕೆಗೆ ₹440 ಹಾಗೂ ವಾಣಿಜ್ಯ\ಕೈಗಾರಿಕೆಗೆ ₹880 ನಿಗದಿ ಮಾಡಿ ನಿರ್ಣಯ ಕೈಗೊಂಡು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಂಡ್ಯಮತ್ತು ನಗರಾಭಿವೃದ್ಧಿ ಇಲಾಖೆಗೂ ಕಳುಹಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ, ಆದರೆ ಈಗ ಈ ವಿಚಾರದಲ್ಲಿ ಮುಖ್ಯಮಂತ್ರಿಗಳೇ ಮಧ್ಯ ಪ್ರವೇಶಿಸಿ ದರ ಪರಿಷ್ಕರಣೆಗೆ ಸೂಚಿಸಿರುವುದು ಉತ್ತಮ ಬೆಳವಣಿಗೆಯಾಗಿದೆ, ಇದರಿಂದ ಮಂಡ್ಯ ನಗರದ ನಾಗರಿಕರಿಗೆ ಅನುಕೂಲವಾಗಲಿದೆ ಎಂದರು.

ದರ ಏರಿಕೆ ಕುರಿತಂತೆ ಶಾಸಕ ಪಿ.ರವಿಕುಮಾರ್ ಹಾಗೂ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ವಿಶೇಷ ಕಾಳಜಿ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದು, ದರ ಪರಿಷ್ಕರಣೆ ನಿವೇದಿಸಿಕೊಂಡಾಗ, ತಕ್ಷಣವೇ ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು ನಗರಾಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿಯವರಿಗೆ ದೂರವಾಣಿ ಮುಖಾಂತರ ಕರೆ ಮಾಡಿ, ದರ ಪರಿಷ್ಕರಣೆಗೆ ಸೂಚಿಸಿ, ಇದಕ್ಕೆ ತಗಲುವ ಬಡ್ಡಿ ದರವನ್ನು ಮನ್ನಾ ಮಾಡಬೇಕೆಂದು ತಿಳಿಸಿರುವುದನ್ನು ತಾವು ಸ್ವಾಗತಿಸುತ್ತೇವೆ, ಇದಕ್ಕಾಗಿ ಸಚಿವ ಚಲುವರಾಯಸ್ವಾಮಿ ಹಾಗೂ ಶಾಸಕ ರವಿಕುಮಾರ್ ಅವರಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದರು.

ಗೋಷ್ಠಿಯಲ್ಲಿ ನಗರಸಭಾ ಸದಸ್ಯರಾದ ಎಂ.ಸಿ.ಶಿವಪ್ರಕಾಶ್, ನಹೀಂ, ಜಿ.ಕೆ.ಶ್ರೀನಿವಾಸ್, ಜಾಕೀರ್ ಹಾಗೂ ಪವಿತ್ರ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!