Thursday, September 19, 2024

ಪ್ರಾಯೋಗಿಕ ಆವೃತ್ತಿ

ಬರ ಪರಿಸ್ಥಿತಿಯಲ್ಲಿ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಿ: ನರೇಂದ್ರಸ್ವಾಮಿ

ರಾಜ್ಯದೆಲ್ಲಡೆ ಬರಗಾಲದ ಛಾಯೆ ಆವರಿಸಿದೆ ಇಂಥ ಪರಿಸ್ಥಿತಿಯಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ನಿಮ್ಮ ಕಾರ್ಯದಕ್ಷತೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ಪಟ್ಟಣದ ತಾ.ಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿ, ಎಲ್ಲ ಅಧಿಕಾರಿಗಳು ಬರಗಾಲದ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರಿ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಮುಂದಿನ ಎಂಟು ತಿಂಗಳ ಕಾಲ ನೀರಿನ ಕೊರತೆ ಕಾಡಲಿದೆ. ಆ ವೇಳೆ ಎಲ್ಲ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದರಲ್ಲೂ ಜನವರಿ ನಂತರದ ದಿನಗಳು ಮತ್ತಷ್ಟು ಸವಾಲು ಎದುರಿಸಬೇಕಾಗಿದೆ. ಹೀಗಾಗಿ ಇಂಥ ಸಮಸ್ಯೆ ಎದುರಿಸಲು ಸಮರ್ಪಕವಾಗಿ ಕೆಲಸ ಮಾಡಬೇಕಿದೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಮೇಘ ಶಾಲಾ ಎನ್‌ಜಿಒ ಸಂಸ್ಥೆ ವತಿಯಿಂದ ವಿವಿಧ ಸರ್ಕಾರಿ ಶಾಲೆಗಳಿಗೆ ಟ್ಯಾಬನ್ನು ವಿತರಿಸಲಾಯಿತು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ತಹಸೀಲ್ದಾರ್ ಕೆ.ಎನ್ ಲೋಕೇಶ್, ತಾಲೂಕು ಪಂಚಾಯತಿ ಇಓ ಮಮತಾ, ಡಿವೈಎಸ್ಪಿ ಕೃಷ್ಣಪ್ಪ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!