Wednesday, November 18, 2026

ಪ್ರಾಯೋಗಿಕ ಆವೃತ್ತಿ

ನಾಗಮಂಗಲ| ಸಹೋದರನ ಮಗನನ್ನೇ ಗುಂಡಿಕ್ಕಿ ಕೊಂದ ರೌಡಿ

ನಾಗಮಂಗಲ ತಾಲೂಕಿನ ಗಡಿಭಾಗದ ಹನುಮನಹಳ್ಳಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ರೌಡಿಯೊಬ್ಬ ತನ್ನ ಅಣ್ಣನ ಮಗನನ್ನೇ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಗ್ರಾಮದ ವಾಸು ಅಲಿಯಾಸ್ ವಿಷಕಂಠ ಅವರ ಪುತ್ರ ಜೈಪಾಲ್ (24) ಕೊಲೆಯಾದ ವ್ಯಕ್ತಿ. ರೌಡಿ ಸೀಮೆಎಣ್ಣೆ ಕುಮಾರ್ ಗುಂಡಿಕ್ಕಿ ಕೊಂದಿದ್ದಾನೆಂದು ತಿಳಿದು ಬಂದಿದೆ.

ಘಟನೆ ವಿವರ 

ರೌಡಿ ಸೀಮೆಎಣ್ಣೆ ಕುಮಾರ್ ಹಾಗೂ ಆತನ ಸಹೋದರ ವಾಸು ನಡುವೆ ಜಮೀನಿನ ವಿಚಾರವಾಗಿ ವಿವಾದವಿತ್ತು. ಇದೇ ವಿಚಾರವಾಗಿ ಆಗಾಗೆ ಗಲಾಟೆ ಸಹ ನಡೆಯುತ್ತಿತ್ತು. ಈ ಸಂಬಂD ಮಾತುಕತೆ ನಡೆಯುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ರೌಡಿ ಸೀಮೆಎಣ್ಣೆ ಕುಮಾರ್, ತನ್ನ ಬಳಿ ಇದ್ದ ಗನ್ ನಿಂದ ಅಣ್ಣನ ಮಗ ಜೈಪಾಲ್ ಮೇಲೆ ಗುಂಡು ಹಾರಿಸಿದ್ದಾನೆ, ಇದರಿಂದ ತೀವ್ರ ಗಾಯಗೊಂಡು ಜೈಪಾಲ್ ರಕ್ತಸ್ರಾವದಿಂದ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಅತ್ಯಂತ ಸಮೀಪದಿಂದಲೇ ಮೂರು ಸುತ್ತು ಗುಂಡು ಹಾರಿಸಿದ್ದಾನೆಂದು ತಿಳಿದು ಬಂದಿದೆ.

ಗುಂಡಿಕ್ಕಿ ಕೊಲೆ ಮಾಡಿದ ರೌಡಿ ಸೀಮೆಎಣ್ಣೆ ಕುಮಾರ್ ಪರಾರಿಯಾಗಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.  ಸ್ಥಳೀಯರು ಯುವಕನ ಮೃತ ದೇಹವನ್ನು ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು, ಬಿಂಡಿಗನವಿಲೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಭೇಟಿ ನೀಡಿ, ಸ್ಥಳ ಪರಿಶೀಲಿಸಿ ಆರೋಪಿ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ