Thursday, September 19, 2024

ಪ್ರಾಯೋಗಿಕ ಆವೃತ್ತಿ

ಹೆಚ್.ಡಿ ದೇವೇಗೌಡರಿಗೆ ನಾಲ್ವಡಿ ದತ್ತಿ ಪ್ರಶಸ್ತಿ ಪ್ರದಾನ

ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಮಾಜಿ ಪ್ರಧಾನಿ ಹಾಗೂ ಜನತಾದಳ ಜಾತ್ಯತೀತ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರಿಗೆ ಸೋಮವಾರ ಪ್ರದಾನ ಮಾಡಲಾಯಿತು. 

ಅನಾರೋಗ್ಯದ ಕಾರಣದಿಂದ ದೇವೇಗೌಡರು ಪ್ರಶಸ್ತಿಯನ್ನು ತಮ್ಮ ಸ್ವಗೃಹದಲ್ಲೇ ಸ್ವೀಕರಿಸಿದರು. ಪ್ರಶಸ್ತಿಯನ್ನು ಭಾರತದ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್. ವೆಂಕಟಾಚಲಯ್ಯ ಅವರು ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾನಾಡೋಜ ಡಾ.ಮಹೇಶ್ ಜೋಶಿ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!