Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ತಂಬಾಕು ನಿಯಂತ್ರಣಕ್ಕಾಗಿ ಗುಲಾಬಿ ಚಳವಳಿ

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನಾಚರಣೆಯ ಅಂಗವಾಗಿ ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ಅನಾನುಕೂಲಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮ ಗುಲಾಬಿ ಆಂದೋಲನ ಮಂಡ್ಯನಗರದಲ್ಲಿ ಮಂಗಳವಾರ ನಡೆಯಿತು.

ಮಂಡ್ಯ ಜಿಲ್ಲೆಯಾದ್ಯಂತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಆರಕ್ಷಕ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಇನ್ನಿತರ ಇಲಾಖೆಗಳ ಸಹಭಾಗಿತ್ವದಲ್ಲಿ ಜರುಗಿತು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟ ಚಾಥಾ ಆರ್‌ಟಿಓ ಕಚೇರಿ 100 ಅಡಿಗಳ ರಸ್ತೆ ಮೂಲಕ ಹೊರಟು, ಕರ್ನಾಟಕ ಬಾರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿ ನಂತರ 100 ರಸ್ತೆ ಮೂಲಕ ಪೊಲೀಸ್ ಕಾಲೋನಿ ಶಾಲೆಯವರೆಗೂ ಅಂಗಡಿ ಮಾಲೀಕರಿಗೆ ಹಾಗೂ ತಂಬಾಕು ಬಳಕೆದಾರರಿಗೆ ವಿದ್ಯಾರ್ಥಿಗಳು ಗುಲಾಬಿ ಹೂವು ನೀಡಿ ಪ್ರೀತಿಪೂರ್ವಕವಾಗಿ ತಂಬಾಕು ಉತ್ಪನ್ನಗಳ ಬಳಕೆಯಿಂದ ಹೊರಬರುವಂತೆ ಮನವಿ ಮಾಡಿದ್ದು ವಿಶೇಷವಾಗಿತ್ತು.

ಜಿಲ್ಲಾಮಟ್ಟದ ಜಾಥಾವನ್ನು ಜಿಲ್ಲಾಧಿಕಾರಿ ಡಾ.ಕುಮಾರ್ ಉದ್ಘಾಟಿಸಿದರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಜಾಥಾದ ನೇತೃತ್ವ ವಹಿಸಿ ನಿಯಮಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಹಾಗೂ ಬಳಕೆ ಮಾಡುತ್ತಿದ್ದ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಿಗೆ ಶಾಲಾ ಮಕ್ಕಳೊಡನೆ ಗುಲಾಬಿ ಹೂ ನೀಡಿ ತಂಬಾಕು ಉತ್ಪನ್ನಗಳ ಬಳಕೆಯಿಂದ ಜನಸಾಮಾನ್ಯರು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ತುತ್ತಾಗುತ್ತಿದ್ದು ಇಂತಹ ಅಕಾಲಿಕ ಸಾವುಗಳನ್ನು ನಿಯಂತ್ರಿಸಲು, ಸಾರ್ವಜನಿಕರು ತಂಬಾಕು ಮುಕ್ತ ಜೀವನ ನಡೆಸಲು ವಿನಂತಿಸಿದರು.

ಅದೇ ರೀತಿ ಈ ದಿನ ನಿಯಮಬಾಹಿರವಾಗಿ ತಂಬಾಕು ಮಾರಾಟ ಮತ್ತು ಬಳಕೆದಾರರಿಗೆ ದಂಡದ ಬದಲು ಮಕ್ಕಳಿಂದ ಗುಲಾಬಿ ಹೂ ನೀಡುತ್ತಿದ್ದು ಇದರಿಂದಲಾದರೂ ಬದಲಾವಣೆ ಆಗಬೇಕೆಂದು ಕೋರಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಕುಮಾರ್.ಹೆಚ್, ಡಾ.ಬೆಟ್ಟಸ್ವಾಮಿ, ತಾಲೂಕು ಆರೋಗ್ಯ ಅಧಿಕಾರಿ ಡಾ.ಜವರೇಗೌಡ, ಕ್ಯಾತುಂಗೆರೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಶಶಿಕಲಾ, ಜಿಲ್ಲಾ ಸಲಹೆಗಾರರಾದ ತಿಮ್ಮರಾಜು ಎಸ್ ಎನ್, ಸಮಾಜ ಕಾರ್ಯಕರ್ತರಾದ ಮೋಹನ್ ಕುಮಾರ್ ಮತ್ತಿತರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ