Thursday, September 19, 2024

ಪ್ರಾಯೋಗಿಕ ಆವೃತ್ತಿ

ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಸಮರ್ಪಕ ಅನುಷ್ಠಾನ- ರಾಮದಾಸ್

ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಅನುಷ್ಠಾನದಲ್ಲಿ ಕರ್ನಾಟಕ ದೇಶದಲ್ಲಿಯೇ 5ನೇ ಸ್ಥಾನದಲ್ಲಿದ್ದು ವರ್ಷಾಂತ್ಯದೊಳಗೆ ಸಮರ್ಪಕ ಅನುಷ್ಠಾನಕ್ಕೆ ತಂದು, ಮೊದಲ ಸ್ಥಾನಕ್ಕೆ ತರಲಾಗುವುದು ಎಂದು ಮಾಜಿ ಶಾಸಕ ಎಸ್ ಎ.ರಾಮದಾಸ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ವನಿಧಿ ಯೋಜನೆಯ ಸಮರ್ಪಕವಾಗಿ ಅನುಷ್ಠಾನ ಗೊಳಿಸಲು ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ಈಗಾಗಲೇ 26 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ.
ಸ್ವನಿಧಿ ಯೋಜನೆಯಡಿ ರಾಜ್ಯದ 311ನಗರ, ಪಟ್ಟಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಿಗೆ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ 3.31ಲಕ್ಷ ಗುರಿ ಹೊಂದಲಾಗಿದ್ದು, 3.08 ಲಕ್ಷ ಮಂದಿಗೆ ಸವಲತ್ತು ಕಲ್ಪಿಸಲಾಗಿದೆ. ನವೆಂಬರ್ ಅಂತ್ಯದೊಳಗೆ ಗುರಿ ಸಾಧನೆ ಮಾಡಲಾಗುವುದು ಎಂದರು.

ಯೋಜನೆಯಡಿ ಪ್ರಾರಂಭಿಕ ಹಂತದಲ್ಲಿ10,000ರೂ. ಸಾಲ ವಿತರಿಸಲಾಗುವುದು. ಸಾಲ ಮರುಪಾವತಿ ಮಾಡಿದಲ್ಲಿ 20,000 ಹಾಗೂ 50,000ರೂ.ಗೆ ಏರಿಕೆ ಮಾಡಲಾಗುತ್ತದೆ. ಈ ಸಾಲವನ್ನು ನಿಗದಿತ ಸಮಯದೊಳಗೆ ಮರುಪಾವತಿ ಮಾಡಿದಲ್ಲಿ ಮುದ್ರಾ ಯೋಜನೆಗೆ ಪರಿವರ್ತನೆ ಮಾಡಿ 10 ಲಕ್ಷ ರೂ.ಗಳವರೆಗೆ ಯಾವುದೇ ಗ್ಯಾರಂಟಿಗಳಿಲ್ಲದೆ ಸಾಲ ನೀಡಲಾಗುತ್ತದೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಮಂಡ್ಯ, ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣ, ಕೆ.ಆರ್. ಪೇಟೆ, ಪಾಂಡವಪುರ, ನಾಗಮಂಗಲ ಹಾಗೂ ಬೆಳ್ಳೂರು ಸ್ಥಳೀಯ ಸಂಸ್ಥೆಗಳಲ್ಲಿ ಈ ಯೋಜನೆ ಜಾರಿಯಲ್ಲಿದ್ದು, ಯೋಜನೆ ಪಡೆದ ಕುಟುಂಬದ ಮಕ್ಕಳಿಗೂ ಸಹ ಸಹಾಯ ಮಾಡುವಂತಹ ಪೂರ್ಣ ಪ್ರಮಾಣದ ಯೋಜನೆಯನ್ನು ರೂಪಿಸಲಾಗಿದೆ ಎಂದರು.

ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಸ್.ಜೆ.ಅಶೋಕ್ ಜಯರಾಂ, ಬಿಜೆಪಿ ಮುಖಂಡರಾದ ಇಂಡುವಾಳು ಎಸ್.ಸಚ್ಚಿದಾನಂದ , ಸಿ.ಟಿ.ಮಂಜುನಾಥ್ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!