ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಧಾರವಾಡ ಇವರ ವತಿಯಿಂದ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಛಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ನ.20 ರಂದು ನಡೆಯಲಿದ್ದು, ಮಂಡ್ಯ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು.
ಅಭ್ಯರ್ಥಿಗಳು 18 ವರ್ಷದಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು. ಅರ್ಜಿ ಸಲ್ಲಿಸಲು ನ.18 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಮೊ.9008194396, 7760145784 ಅನ್ನು ಸಂಪರ್ಕಿಸಬಹುದಾಗಿದೆ.




