ಮಂಡ್ಯ ತಾಲೂಕು ಹಳುವಾಡಿ ಗ್ರಾಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ನೇತೃತ್ವದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಕ್ರಮ ಯೋಜನೆ ಅಡಿಯಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಜೀವನ ನಿರ್ವಹಣೆ ಕಾರ್ಯಕ್ರಮವನ್ನು ಶಾಸಕ ಎಬಿ ರಮೇಶ್ ಬಾಬು ಬಂಡಿಸಿದ್ದೇಗೌಡ ಉದ್ಘಾಟಿಸಿದರು.
ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಶಂಕರ್ ಬಲ್ಲಾಳ್ ಉಪನ್ಯಾಸ ನೀಡಿ, ಮಕ್ಕಳು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು. ಪರೀಕ್ಷೆಗಿಂತ ಬದುಕು ಮುಖ್ಯ ಬದುಕಿನಲ್ಲಿ ಆತ್ಮವಿಶ್ವಾಸದಿಂದ ಯಾವುದೇ ಕೆಲಸವನ್ನು ಮಾಡಿದರೆ ಸಾಧನೆ ಸಾಧ್ಯವಾಗುತ್ತದೆ. ಯಾವುದೇ ಸಂದರ್ಭದಲ್ಲಿ ಆತಂಕಕ್ಕೆ ಒಳಗಾಗದೆ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಅವರು ಪರೀಕ್ಷೆ ಹಾಗೂ ದಿನನಿತ್ಯದ ಓದು ವಿಧಾನದ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಉಪನ್ಯಾಸಕರು ಹಾಗೂ ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರು ಹಾಗೂ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.




