Thursday, November 19, 2026

ಪ್ರಾಯೋಗಿಕ ಆವೃತ್ತಿ

ದಲಿತ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಎಸ್ಐಟಿ ತನಿಖೆಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಮದ್ದೂರು ತಾಲ್ಲೂಕಿನ ತೊರೆಬೊಮ್ಮನಹಳ್ಳಿ ಗ್ರಾಮದ ದಲಿತ ಅಪ್ರಾಪ್ತ ಯುವತಿ ಮೇಲೆ ನಾಲ್ವರು ದುರುಳರು ಅತ್ಯಾಚಾರ ನಡೆಸಿದ್ದು, ಈ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸುವಂತೆ ಆಗ್ರಹಿಸಿ ಮಂಡ್ಯನಗರದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ( ಬಿ.ಕೃಷ್ಣಪ್ಪ ಸ್ಥಾಪಿತ) ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಮದ್ದೂರಿನ ಲಿಖಿತ ಲಾಡ್ಜ್ ನಲ್ಲಿ  ನಡೆದ ಅಪ್ರಾಪ್ತ ದಲಿತ ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್.ಐ.ಟಿ ತನಿಖೆಗೆ ವಹಿಸಬೇಕು, ಕಾಮಾಂಧ ಆರೋಪಿಗಳನ್ನು ಕಠಿಣ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ಅತ್ಯಾಚಾರ ಆರೋಪಿಗಳಾದ ಪುನೀತ್, ಮಂಜುನಾಥ, ಸಿದ್ದರಾಜು ಇವರಲ್ಲದೇ ಕೈ ಬಿಟ್ಟಿರುವ ಆರೋಪಿ  ಕಳ್ಳಮಳೆದೊಡ್ಡಿಯ ಭರತ್ ಹೆಸರನ್ನು ಎಫ್ಐಆರ್ ನಲ್ಲಿ ದಾಖಲಿಸಬೇಕೆಂದು ಆಗ್ರಹಿಸಿದರು.

ಅಪ್ರಾಪ್ತ ದಲಿತ ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಮದ್ದೂರಿನ ಲಿಖಿತ್‌ ಲಾಡ್ಜ್ ಮಾಲೀಕರು ಮತ್ತು ಸಿಬ್ಬಂದಿಗಳನ್ನು ಆರೋಪಿಗಳನ್ನಾಗಿಸಿ, ಈ ಕೂಡಲೇ ಬಂಧಿಸಬೇಕು. ಈ ಕೂಡಲೇ ಲಿಖಿತ ಲಾಡ್ಜ್ ನ್ನು ಮುಚ್ಚಿಸಬೇಕೆಂದು ಆಗ್ರಹಿಸಿದರು.

ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ಥ ವಿದ್ಯಾರ್ಥಿನಿಗೆ ಸರ್ಕಾರಿ ನೌಕರಿ ನೀಡಬೇಕು. ಕೂಡಲೇ ರಾಜ್ಯ ಸರ್ಕಾರದ ಸಚಿವರ ಸಂತ್ರಸ್ಥರ ಕುಟುಂಬಕ್ಕೆ ಸಾಂತ್ವನ ಹೇಳಿ, ಆ ಕುಟುಂಬಕ್ಕೆ ಪುನರ್ ವಸತಿ ಸ್ಥಾಪಿಸಿ, ನ್ಯಾಯ, ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿ, ವಿಭಾಗೀಯ ಸಂಚಾಲಕ ಅನಿಲ್ ಕುಮಾರ್, ಜಿಲ್ಲಾಧ್ಯಕ್ಷ ಶ್ರೀನಿವಾಸ್, ಪದಾಧಿಕಾರಿಗಳಾದ ಆನಂದ್, ನಾಗರಾಜ್, ಕುಮಾರ್, ರಾಮಕೃಷ್ಣ, ಸೋಮಶೇಖರ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ