Friday, September 20, 2024

ಪ್ರಾಯೋಗಿಕ ಆವೃತ್ತಿ

ಜೆಡಿಎಸ್ ಕಚೇರಿ ಎದುರು ಪ್ರತ್ಯಕ್ಷವಾದ ”ವಿದ್ಯುತ್ ಕಳ್ಳ” ಪೋಸ್ಟರ್ !

ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬೆಸ್ಕಾಂನಿಂದ ಎಫ್‌ಐಆರ್ ದಾಖಲಾಗಿರುವ ಬೆನ್ನಲ್ಲೇ, ಬೆಂಗಳೂರಿನ ಜೆಡಿಎಸ್ ಕಚೇರಿಯ ಗೋಡೆಗಳಲ್ಲಿ ”ವಿದ್ಯುತ್ ಕಳ್ಳ ಕುಮಾರಸ್ವಾಮಿ” ಎಂಬ ಪೋಸ್ಟರ್​ಗಳು ಮಂಗಳವಾರ ರಾತ್ರಿ ಪ್ರತ್ಯಕ್ಷವಾಗಿದೆ.

ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪ ಎದುರಿಸುತ್ತಿರುವ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವ್ಯಂಗ್ಯವಾಡಲು ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

“>

‘ಕರೆಂಟ್​ ಕದ್ದರೂ ಹೆಚ್​ಡಿಕೆ ಪ್ರಾಮಾಣಿಕತೆಯನ್ನು ಮೆಚ್ಚಲೇಬೇಕು’, ‘ಕುಮಾರಸ್ವಾಮಿಯವರೇ, 200 ಯುನಿಟ್​ ಉಚಿತವಾಗಿದೆ ನೆನಪಿಟ್ಟುಕೊಳ್ಳಿ, ಹೆಚ್ಚು ಕದಿಯಬೇಡಿ, ‘ಕರೆಂಟ್​ ಕಳ್ಳ ಕುಮಾರಸ್ವಾಮಿ’ ಎಂಬಿತ್ಯಾದಿ ಪೋಸ್ಟರ್​ಗಳನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಪ್ರಧಾನ ಕಚೇರಿ ‘ಜೆಪಿ ಭವನ’ದ ತಡೆಗೋಡೆಯಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಅಂಟಿಸಲಾಗಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಸುದ್ದಿಯಾಗಿದ್ದ 40 ಪರ್ಸೆಂಟ್ ಕಮಿಷನ್ ಆರೋಪದ ಬಳಿಕ, ಕಾಂಗ್ರೆಸ್ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಅಂಟಿಸಿದ್ದ ‘ಪೇಸಿಎಂ ಪೋಸ್ಟರ್’ ದೇಶಾದ್ಯಂತ ವ್ಯಾಪಕ ಚರ್ಚೆಗೊಳಗಾಗಿತ್ತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!