ಸಾರ್ವಜನಿಕರು ಹಾಗೂ ಮಕ್ಕಳನ್ನು ಓದಿನತ್ತ ಕರೆತರಲು ಗ್ರಂಥಾಲಯಗಳು ಪ್ರಮುಖ ಪಾತ್ರ ವಹಿಸುತ್ತದೆ. ಗ್ರಂಥಾಲಯಗಳು ಸಾರ್ವಜನಿಕ ಸ್ನೇಹಿಯಾಗಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.
ಮದ್ದೂರು ತಾಲ್ಲೂಕಿನ ಸಾದೊಳಲು ಗ್ರಾಮದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮದ್ದೂರು ತಾಲೂಕಿನ ಸಾದೂಳಲು ಗ್ರಾಮದ ಸರ್ಕಾರಿ ಶಾಲೆ ಮಕ್ಕಳ ಕೊರತೆಯಿಂದ ಮುಚ್ಚುವ ಸ್ಥಿತಿ ಇತ್ತು, ಇದನ್ನು ಗಮನಿಸಿದ ಪಂಚಾಯತ್ ಅಧಿಕಾರಿ, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸಾರ್ವಜನಿಕರು ಡಿಜಿಟಲ್ ಗ್ರಂಥಾಲಯ ಪ್ರಾರಂಭಿಸಿದ್ದಾರೆ. ಇದಕ್ಕೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು ಎಂದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳು ಇದೇ ಮಾದರಿಯಲ್ಲಿ ನಡೆಯಲಿ. ಗ್ರಾಮದಿಂದ ಆಯ್ಕೆಯಾದ ಸದಸ್ಯರು ಗ್ರಾಮದ ಅಭಿವೃದ್ಧಿಗೆ ಶ್ರಮವಹಿಸಿ ಕೆಲಸ ಮಾಡಲಿ ಎಂದರು.
ಇದೇ ಸಂದರ್ಭದಲ್ಲಿ ಮದ್ದೂರಿನ ಶಾಸಕ ಕೆ.ಎಂ ಉದಯ್, ಗ್ರಾಮ ಪಂಚಾಯತ್ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.




