Friday, November 20, 2026

ಪ್ರಾಯೋಗಿಕ ಆವೃತ್ತಿ

ಸರ್ಕಾರದ ಸವಲತ್ತು ಬಗ್ಗೆ ಜನತೆಗೆ ಸಮರ್ಪಕವಾಗಿ ತಿಳಿಸಿ: ಚಲುವರಾಯಸ್ವಾಮಿ

ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಜನತೆಗೆ ತಿಳಿಸಿ ಎಂದು ಸಚಿವ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಾಗಮಂಗಲ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ನಡೆದ ಆರೋಗ್ಯ ಸುರಕ್ಷಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಸಮರ್ಪಕವಾಗಿ ಸದುಪಯೋಗ ಪಡಿಸಿಕೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಿ ಎಂದರು.

ಕಂದಾಯ, ಕೃಷಿ ಇಲಾಖೆ, ನೀರಾವರಿ, ಪಶು ಇಲಾಖೆ ಹಾಗೂ ಇತರೆ ಇಲಾಖೆಗಳು ರೈತರಿಗೆ ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ತಲುಪಿಸುವ ಉದ್ದೇಶದಿಂದ ಕೆಲಸ ಮಾಡಬೇಕು, ಇದು ಪ್ರತಿಯೊಬ್ಬ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿದ್ದು ಸಾರ್ವಜನಿಕರಿಗೆ ಮನವರಿಕೆ ಮಾಡಿ ಎಂದು ಸೂಚಿಸಿದರು.

ಕಂದಾಯ ಇಲಾಖೆಯಲ್ಲಿರುವ ವಿವಿಧ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ವ್ಯವಸ್ಥೆ ಅಧಿಕಾರಿಗಳ ಮೇಲಿದೆ, ಅವುಗಳ ಸದುಪಯೋಗವನ್ನು ಸಾರ್ವಜನಿಕರು ಮಾಡಿಕೊಳ್ಳಬೇಕೆಂದರು.

ಇದೇ ಸಂದರ್ಭದಲ್ಲಿ ಅಪಾರ ಜಿಲ್ಲಾಧಿಕಾರಿ ನಾಗರಾಜು, ಉಪವಿಭಾಗಧಿಕಾರಿ ನಂದೀಶ್ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ