Friday, September 20, 2024

ಪ್ರಾಯೋಗಿಕ ಆವೃತ್ತಿ

ಹೆಣ್ಣುಭ್ರೂಣ ಹತ್ಯೆ ಪ್ರಕರಣ ಸಿ.ಐ.ಡಿ ಗೆ ವಹಿಸಲು ಚಿಂತನೆ: ಚಲುವರಾಯಸ್ವಾಮಿ

ಮಂಡ್ಯದ ಹಾಡ್ಯ-ಹುಳ್ಳೇನಹಳ್ಳಿ ಆಲೆಮನೆಯಲ್ಲಿ ಹೆಣ್ಣುಭ್ರೂಣ ಹತ್ಯೆ ಸ್ಕ್ಯಾನಿಂಗ್ ನಡೆಸಿ, ಮೈಸೂರಿನಲ್ಲಿ ಭ್ರೂಣ ಹತ್ಯೆ ನಡೆಸಲಾಗುತ್ತಿದ್ದ ಪ್ರಕರಣವನ್ನು ಸಿ.ಐ.ಡಿ ಗೆ ವಹಿಸಲು ಚಿಂತನೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಭ್ರೂಣಹತ್ಯೆಯ ಬಗ್ಗೆ ದಾಖಲಾಗಿರುವ ಪ್ರಕರಣ ತನಿಖೆ ಹಂತದಲ್ಲಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಕೇವಲ ಒಂದು ಜಿಲ್ಲೆಗೆ ಸೀಮಿತವಾಗಿಲ್ಲ. ಎರಡು ಮೂರು ಜಿಲ್ಲೆಗೆ ಸೇರಿದೆ. ಸ್ಕ್ಯಾನಿಂಗ್ ಕೆಲಸ ನಡೆದ ಸ್ಥಳಗಳಲ್ಲಿ ಯಾವುದೇ ರೀತಿಯ ಸ್ಯಾನಿಂಗ್ ಉಪಯೋಗಿಸುವ ವಸ್ತುಗಳು ದೊರಕಿಲ್ಲ ಎಂದು ತಿಳಿಸಿದರು.

ಭ್ರೂಣ ಹತ್ಯೆ ತಡೆಗಟ್ಟಲು ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಕಂದಾಯ, ಪೊಲೀಸ್, ಮಹಿಳಾ, ಆರೋಗ್ಯ ಇಲಾಖೆ ಸದಸ್ಯರ ನ್ನೊಳಗೊಂಡ ತಂಡ ರಚಿಸಲಾಗಿದೆ. ಈ ತಂಡಗಳು ನಿರಂತರವಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಡಯಾಗ್ನೋಸ್ಟಿಕ್ ಸೆಂಟರ್, ಲ್ಯಾಬ್ ಗಳನ್ನು ಪರಿಶೀಲಿಸಬೇಕು. ಅನಧಿಕೃತ ಲ್ಯಾಬ್, ಪರವಾನಗಿ ಇಲ್ಲದ ವೈದ್ಯರು, ಕ್ಲಿನಿಕ್ ನಡೆಸುತ್ತಿದ್ದಲ್ಲಿ ಕ್ರಮ ಕೈಗೊಂಡು ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಯಾವುದಾರರೂ ಅಪರಿಚಿತ ವ್ಯಕ್ತಿ, ವಾಹನದ ಓಡಾಟ ಕಂಡುಬಂದಲ್ಲಿ ನಿಗಾ ವಹಿಸಿ, ತನಿಖೆ ನಡೆಸಿ ಇದು ನಿರಂತರವಾಗಿ ನಡೆಯಬೇಕು ಎಂದರು.

ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಮಧು ಜಿ ಮಾದೇಗೌಡ, ದಿನೇಶ್ ಗೂಳೀಗೌಡ, ಮಂಡ್ಯ ಶಾಸಕ ರವಿಕುಮಾರ್ ಗೌಡ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!