Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ವಕೀಲನ ಮೇಲೆ ಹಲ್ಲೆ ಖಂಡಿಸಿ ವಕೀಲರ ಪ್ರತಿಭಟನೆ

ಚಿಕ್ಕಮಗಳೂರಿನ ಯುವ ವಕೀಲ ಪ್ರೀತಂ ಅವರ ಮೇಲೆ ಅಲ್ಲಿನ ಪೊಲೀಸ್ ಸಿಬ್ಬಂದಿ ವಿನಾಕಾರಣ ಅಮಾನುಷವಾಗಿ ಮನಬಂದಂತೆ ಥಳಿಸಿ ಘಾಸಿ ಮಾಡಿರುವ ಘಟನೆ ಖಂಡಿಸಿ ಮಂಡ್ಯ ಹಾಗೂ ಮಳವಳ್ಳಿಯ ಕೋರ್ಟ್ ಆವರಣದಲ್ಲಿ ವಕೀಲರು ಶನಿವಾರ ನಡೆಸಿದರು.

ಮಂಡ್ಯ ಹಾಗೂ ಮಳವಳ್ಳಿ ತಾಲ್ಲೂಕು ವಕೀಲರ ಸಂಘದಿಂದ ಶನಿವಾರ ದಿನದ ನ್ಯಾಯಾಲಯದ ಕಲಾಪಗಳಿಂದ ವಕೀಲರು, ಸ್ವಯಂ ಪ್ರೇರಿತವಾಗಿ ಹೊರ ಉಳಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಮಳವಳ್ಳಿ ತಾಲೂಕಿನ ವಕೀಲರ ಸಂಘದ ಅಧ್ಯಕ್ಷ ಸುಂದರ್ ಮಾತನಾಡಿ, ಯುವ ವಕೀಲರ ಮೇಲೆ ಚಿಕ್ಕಮಗಳೂರು ಪೊಲೀಸ್ ಸಿಬ್ಬಂದಿ ನಡೆಸಿರುವ ಹಲ್ಲೆ ಖಂಡನೀಯ. ವಕೀಲರು ಸಮಾಜದ ಅಭಿರಕ್ಷಕರು, ಇವರನ್ನೇ ಪೊಲೀಸ್ ಇಲಾಖೆಯವರು ಹೀಗೆ ನಡಿಸಿಕೊಂಡರೆ, ಇನ್ನು ಸಾಮಾನ್ಯ ಜನರನ್ನು ಹೇಗೆ ನಡೆಸಿಕೊಳ್ಳುತ್ತಾರೆ ಎಂಬ ಪ್ರಶ್ನೆ ವಕೀಲ ಸಮುದಾಯದಲ್ಲಿ ಮೂಡಿದೆ ಎಂದು ಹೇಳಿದರು.

ಪ್ರಕರಣ ದಾಖಲಿಸಿ ಆರೋಪಿಗಳ ವಿರುದ್ದ ಎಫ್ಐಅರ್ ದಾಖಲಾದರೂ ಆರೋಪಿಗಳನ್ನು ಬಂಧನ ಮಾಡದೇ ಇರುವುದು ಸರಿಯಲ್ಲ. ಪ್ರಕರಣದ ಗಂಭೀರತೆಯನ್ನು ಅರಿತ ರಾಜ್ಯ ಸರ್ಕಾರ ಆರೋಪಿಗಳನ್ನು ಸೇವೆಯಿಂದ ಅಮಾನತು ಮಾಡಿದೆ. ಆದರೆ ಅರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಸೂಕ್ತ ರೀತಿಯಲ್ಲಿ ಕಾನೂನು ಕ್ರಮ ಜರುಗಿಸಬೇಕು ಎಂಬುದು ರಾಜ್ಯದ ಎಲ್ಲಾ ವಕೀಲ ಸಂಘಗಳ ಆಗ್ರಹ ಆಗಿದೆ ಎಂದರು.

ಸಂಘದ ಕಾರ್ಯದರ್ಶಿ ನಟೇಶ್,ವಕೀಲರಾದ ಬಸವರಾಜು, ಮಲ್ಲೇಶ್, ಹರ್ಷವರ್ಧನ್, ಸಿದ್ದಯ್ಯ, ಭಾಸ್ಕರ್, ಮುನೀಂದ್ರ ವಕೀಲರ ಸಂಘದ ಪದಾಧಿಕಾರಿಗಳು ಸೇರಿದಂತೆ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ